UK Suddi
The news is by your side.

ಗದುಗಿನಲ್ಲಿ ಕೇಂದ್ರೀಯ ವಿದ್ಯಾಲಯ ಸ್ಥಾಪನೆ
ಗದಗ: ಪ್ರಸಕ್ತ ವರ್ಷ ಹಾವೇರಿ ಭಾಗದಲ್ಲಿ ಕೇಂದ್ರೀಯ ವಿದ್ಯಾಲಯ ಆರಂಭವಾಗಲಿದ್ದು, ಮುಂದಿನ ವರ್ಷದಲ್ಲಿ ಗದಗದಲ್ಲೂ ಕೇಂದ್ರೀಯ ವಿದ್ಯಾಲಯ ಸ್ಥಾಪನೆಗೆ ಆದ್ಯತೆ ನೀಡಲಾಗುವುದು ಎಂದು ಸಂಸದ ಶಿವಕುಮಾರ ಉದಾಸಿ ಹೇಳಿದರು.  
ನಗರದ ಬಂಜಾರ ಭವನದಲ್ಲಿ ಜಿಲ್ಲಾ ಬಿಜೆಪಿ ಘಟಕದಿಂದ ಬುಧವಾರ ಹಮ್ಮಿಕೊಂಡಿದ್ದ ಜನ ಕಲ್ಯಾಣ ಪರ್ವ ಸಭೆಯಲ್ಲಿ ಮಾತನಾಡಿದ ಅವರು, ಬ್ಯಾಡಗಿಯಲ್ಲಿ ಪ್ರಾದೇಶಿಕ ಸಾಂಬಾರು ಮಂಡಳಿ ಕಚೇರಿ ಸ್ಥಾಪನೆಗೆ ಚಾಲನೆ ದೊರೆಯಲಿದೆ.
ಕೇಂದ್ರದ ಎನ್‌ಡಿಎ ಸರ್ಕಾರ ಆಡಳಿತಕ್ಕೆ ಬಂದ ಒಂದೇ ವರ್ಷದಲ್ಲಿ ಹಣದುಬ್ಬರ ನಿಯಂತ್ರಣ ಸೇರಿದಂತೆ ವಿವಿಧ ಅಭಿವೃದ್ಧಿ ಕಾರ್ಯಗಳ ಜತೆಗೆ ಗ್ರಾಮಗಳ ವಿಕಾಸಕ್ಕೆ ಮಹತ್ವ ನೀಡಿದೆ. ಕೇಂದ್ರ ಯೋಜನೆಗಳನ್ನು ಈ ಭಾಗಕ್ಕೆ ತರಲು ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು ಎಂದು ಭರವಸೆ ನೀಡಿದರು.
For North Karnataka News visit www.uksuddi.in

Comments