UK Suddi
The news is by your side.

ಮೊದಲ ಹಂತದ ‘ಹಳ್ಳಿಫೈಟ್’ ಶುರು

ರಾಜ್ಯದ 15 ಜಿಲ್ಲೆಗಳ 3,156 ಗ್ರಾಮ ಪಂಚಾಯಿತಿಗಳಿಗೆ ಶುಕ್ರವಾರ ಮತದಾನ ಆರಂಭಗೊಂಡಿದೆ. 48621 ಅಭ್ಯರ್ಥಿಗಳ ಭವಿಷ್ಯವನ್ನು ಮತದಾರರು ಬರೆಯಲಿದ್ದಾರೆ. ಬೆಳಗ್ಗೆ 7 ರಿಂದ ಸಂಜೆ 5 ಗಂಟೆ ವರೆಗೆ ಮತದಾನ ನಡೆಯಲಿದ್ದು, 1,20,663 ಮತದಾರರು ಮತ ಚಲಾಯಿಸುವ ಹಕ್ಕು ಹೊಂದಿದ್ದಾರೆ.

ಮೈಸೂರು ಹಾಗೂ ಬೆಳಗಾವಿ ವಿಭಾಗ ವ್ಯಾಪ್ತಿಯ 43,579 ಗ್ರಾಮ ಪಂಚಾಯಿತಿ ಕ್ಷೇತ್ರಗಳಿಗೆ ಮೊದಲ ಹಂತದಲ್ಲಿ ಚುನಾವಣೆ ನಡೆಯಲಿದೆ. ಚಿಕ್ಕಮಗಳೂರು, ದಕ್ಷಿಣ ಕನ್ನಡ, ಉಡುಪಿ, ಹಾಸನ, ಕೊಡಗು, ಮಂಡ್ಯ,ಮೈಸೂರು, ಚಾಮರಾಜನಗರ, ಬೆಳಗಾವಿ, ವಿಜಯಪುರ, ಬಾಗಲಕೋಟೆ, ಧಾರವಾಡ, ಗದಗ, ಹಾವೇರಿ, ಉತ್ತರ ಕನ್ನಡ ಜಿಲ್ಲೆಗಳ 3,156 ಗ್ರಾಮ ಪಂಚಾಯಿತಿಯಲ್ಲಿ 48,621 ಸ್ಥಾನಗಳಿವೆ. ಈ ಪೈಕಿ 554 ಸ್ಥಾನಗಳಿಗೆ ಯಾರೊಬ್ಬರೂ ನಾಮಪತ್ರ ಸಲ್ಲಿಸಿಲ್ಲ. 4,460 ಸದಸ್ಯ ಸ್ಥಾನಗಳಿಗೆ ಈಗಾಗಲೇ ಅವಿರೋಧವಾಗಿ ಆಯ್ಕೆಯಾಗಿದೆ.

For North Karnataka News visit www.uksuddi.in

Comments