UK Suddi
The news is by your side.

ಯಲ್ಲಟ್ಟಿ : ಗುಡ್ಡ ಕುಸಿದು ನಾಲ್ವರು ಕಾರ್ಮಿಕರ ದುರ್ಮರಣ

ಜಮಖಂಡಿ: ಗುಡ್ಡ ಕುಸಿದು ನಾಲ್ವರು ಕಾರ್ಮಿಕರು ಮೃತಪಟ್ಟಿರುವ ಘಟನೆ ತಾಲೂಕಿನ ಯಲ್ಲಹಟ್ಟಿ ಗ್ರಾಮದ ಬಳಿ ನಡೆದಿದೆ. ಜೆಸಿಬಿಯಿಂದ ಟ್ರ್ಯಾಕ್ಟರ್‌ಗೆ ಮಣ್ಣು ತುಂಬುತ್ತಿದ್ದ ವೇಳೆ ಗುಡ್ಡ ಕುಸಿದು ಈ ದುರ್ಘಟನೆ ಸಂಭವಿಸಿದೆ.  ಇನ್ನೂ ನಾಲ್ವರು ಕಾರ್ಮಿಕರು ಮಣ್ಣಿನ ಅವಶೇಷಗಳಡಿ ಸಿಲುಕಿದ್ದಾರೆ ಎಂದು ಶಂಕಿಸಲಾಗಿದೆ. ಈ ಸಂಬಂಧ ಬನಹಟ್ಟಿ ಠಾಣೆ ಪೊಲೀಸರು ಹಾಗೂ ಅಗ್ನಿಶಾಮಕ ಸಿಬ್ಬಂದಿಗಳು ಸ್ಥಳಕ್ಕೆ ಆಗಮಿಸಿದ್ದು, ಸ್ಥಳೀಯರ ನೆರವಿನೊಂದಿಗೆ ಮಣ್ಣಿನಡಿ ಸಿಲುಕಿರುವ ಉಳಿದ ನಾಲ್ವರ ರಕ್ಷಣಾ ಕಾರ್ಯ ಸಾಗಿದೆ. ಈ ಸಂಬಂಧ ಬನಹಟ್ಟಿ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.

For North Karnataka News visit www.uksuddi.in

Comments