UK Suddi
The news is by your side.

1965ರ ಸಮರ ಯೋಧರಿಗೆ ಶ್ರದ್ಧಾಂಜಲಿ

ಪ್ರಧಾನಿ ನರೇಂದ್ರ ಮೋದಿ ಮತ್ತು ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರು ಶುಕ್ರವಾರ ಇಲ್ಲಿ 1965ರ ಭಾರತ- ಪಾಕಿಸ್ತಾನ ಸಮರದ 50ನೇ ವರ್ಷಾಚರಣೆ ಸಂದರ್ಭದಲ್ಲಿ ಹುತಾತ್ಮ ಯೋಧರಿಗೆ ಶ್ರದ್ಧಾಂಜಲಿ ಸಲ್ಲಿಸಿದ್ದಾರೆ.

‘1965ನೇ ವರ್ಷದ ಸಮರದ 50ನೇ ವರ್ಷಾಚರಣೆ ಸಂದರ್ಭದಲ್ಲಿ ನಾನು ನಮ್ಮ ತಾಯ್ನಾಡಿಗಾಗಿ ಹೋರಾಡಿದ ಎಲ್ಲಾ ಧೈರ್ಯಶಾಲಿ ಯೋಧರಿಗೂ ತಲೆಬಾಗುತ್ತೇನೆ’ ಎಂದು ಪ್ರಧಾನಿ ಮೋದಿ ಟ್ವೀಟ್ ಮಾಡಿದ್ದಾರೆ.

‘ನಮ್ಮ ಸಶಸ್ತ್ರ ಯೋಧರ ಧೈರ್ಯ ಮತ್ತು ಶೌರ್ಯ ಸ್ಪೂರ್ತಿದಾಯಕ. ಪ್ರತಿಯೊಂದು ಅಡ್ಡಿ ಆತಂಕ ಎದುರಾದಾಗಲೂ ಅವರು ಭಾರತದ ಏಕತೆ ಮತ್ತು ಸಮಗ್ರತೆಯನ್ನು ರಕ್ಷಿಸಿದ್ದಾರೆ’ ಎಂದು ಪ್ರಧಾನಿ ಹೇಳಿದ್ದಾರೆ.

ಈ ಮಧ್ಯೆ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರು ಅಮರ ಜ್ಯೋತಿ ಜವಾನ್​ಗೆ ತೆರಳಿ ಹುತಾತ್ಮ ಯೋಧರ ಸ್ಮಾರಕದಲ್ಲಿ ತಮ್ಮ ಶ್ರದ್ಧಾಂಜಲಿ ಸಲ್ಲಿಸಿದರು.

For North Karnataka News visit www.uksuddi.in

Comments