UK Suddi
The news is by your side.

8,500 ಪೊಲೀಸರ ನೇಮಕ ಮಾಡಲು ಅನುಮತಿ : ಜಾರ್ಜ್

 
ರಾಜ್ಯದಲ್ಲಿ 8,500 ಪೊಲೀಸರನ್ನು ನೇಮಕ ಮಾಡಿಕೊಳ್ಳಲು ಮುಖ್ಯಮಂತ್ರಿಗಳಿಂದ ಅನುಮತಿ ಸಿಕ್ಕಿದೆ. ಆಡಳಿತಾತ್ಮಕ ಒಪ್ಪಿಗೆ ನಂತರ ರಾಜ್ಯದಲ್ಲಿ ಖಾಲಿ ಇರುವ ಪೊಲೀಸರನ್ನು ನೇಮಕ ಮಾಡಿಕೊಳ್ಳಲಾಗುವುದು ಎಂದು ಗೃಹ ಸಚಿವ ಕೆ.ಜೆ. ಜಾರ್ಜ್ ತಿಳಿಸಿದರು.  ನಗರದ ಹೊರ ವಲಯದಲ್ಲಿರುವ ಅಣಕನೂರು ಪ್ರದೇಶದಲ್ಲಿ ಜಿಲ್ಲಾ ಪೊಲೀಸ್ ಅಧೀಕ್ಷಕರ ಕಚೇರಿ ಕಟ್ಟಡ ನಿರ್ಮಾಣಕ್ಕೆ ಶಂಕುಸ್ಥಾಪನೆ ನೆರವೇರಿಸಿದ ನಂತರ ಬಹಿರಂಗ ಸಭೆಯಲ್ಲಿ ಮಾತನಾಡಿದ ಅವರು, ಪೊಲೀಸ್ ಇಲಾಖೆ ಜನ ಸ್ನೇಹಿಯಾಗಿ ಕರ್ತವ್ಯ ನಿರ್ವಹಿಸಲು ಸೂಚನೆ ನೀಡುವ ಜೊತೆಗೆ ಸ್ವತಂತ್ರವಾಗಿ ಕಾರ್ಯನಿರ್ವಹಿಸಲು ವ್ಯವಸ್ಥೆ ಕಲ್ಪಿಸಲಾಗಿದೆ ಎಂದು ಹೇಳಿದರು.
For North Karnataka News visit www.uksuddi.in

Comments