ದೀಪಾವಳಿಯಂದು ಪಟಾಕಿ ನಿಷೇಧಿಸಲು ಸುಪ್ರೀಂ ನಕಾರ
ದೀಪಾವಳಿ ಹಬ್ಬದಂದು ಪಟಾಕಿ ನಿಷೇಧಿಸಬೇಕೆಂದು ಕೋರಿ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ(ಪಿಐಎಲ್)ಯನ್ನು ಸುಪ್ರೀಂಕೋರ್ಟ್ ಬುಧವಾರ ವಜಾಗೊಳಿಸಿದೆ.
ಪಟಾಕಿಯನ್ನು ಸಂಪೂರ್ಣವಾಗಿ ನಿಷೇಧಿಸಲು ನಿರಾಕರಿಸಿರುವ ಸುಪ್ರೀಂ ಪೀಠ, ಅಕ್ಟೋಬರ್ 31ರಿಂದ ನವೆಂಬರ್ 12ರವರೆಗೆ ಪರಿಸರ ಮಾಲಿನ್ಯದ ಬಗ್ಗೆ ಜನರಲ್ಲಿ ಅರಿವು ಮೂಡಿಸಲು ಜಾಗೃತಿ ಅಭಿಯಾನ ಕೈಗೊಳ್ಳುವಂತೆ ಕೇಂದ್ರ ಸರ್ಕಾರಕ್ಕೆ ನಿರ್ದೇಶನ ನೀಡಿದೆ.
ಪರಿಸರ ಕಲುಷಿತವಾಗುವುದನ್ನು ತಡೆಯುವ ನಿಟ್ಟಿನಲ್ಲಿ ದೀಪಾವಳಿಯಂದು ಪಟಾಕಿ ನಿಷೇಧಿಸಬೇಕೆಂದು 6 ವರ್ಷದ ಮಕ್ಕಳಾದ ಅರ್ಜುನ್ ಗೋಪಾಲ್, ಆರವೌ ಭಂಡಾರಿ ಮತ್ತು ಝೋಯಾ ರಾವ್ ಭಾಸಿನ್ ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದರು.
ಈ ಪಿಐಎಲ್ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್, ಪಟಾಕಿ ನಿಷೇಧಿಸಲು ಸಾಧ್ಯವಿಲ್ಲ ಎಂದು ಆದೇಶ ನೀಡಿದೆ. ಅಲ್ಲದೇ ಪರಿಸರ ಮಾಲಿನ್ಯ ಕುರಿತು ಜಾಗೃತಿ ಅಭಿಯಾನ ನಡೆಸುವಂತೆ ಕೇಂದ್ರಕ್ಕೆ ಸೂಚನೆ ನೀಡಿದೆ.
For North Karnataka News visit www.uksuddi.in