ಕಳಸಾ-ಬಂಡೂರಿಗಾಗಿ ಮೋದಿ, ಉಮಾ ಭಾರತಿಗೆ ಮೊರೆ
ಬುಧವಾರ ಶಾಸಕರ ಭವನದ ಸಭಾಂಗಣದಲ್ಲಿ ನಡೆದ ವಿವಿಧ ಮಠಾಧೀಶರು, ಜನಪ್ರತಿನಿಧಿಗಳು, ರೈತರ ಮಹತ್ವದ ಸಭೆಯಲ್ಲಿ ಈ ನಿರ್ಣಯ ಕೈಗೊಳ್ಳಲಾಯಿತು. ಜತೆಗೆ ಗೋವಾ, ಮಹಾರಾಷ್ಟ್ರದ ಮುಖ್ಯಮಂತ್ರಿಗಳು ಹಾಗೂ ಪ್ರತಿಪಕ್ಷಗಳ ನಾಯಕರನ್ನು ಭೇಟಿ ಮಾಡಿ, ಸೌಹಾರ್ದಯುತವಾಗಿ ಸಮಸ್ಯೆ ಬಗೆಹರಿಸಿಕೊಳ್ಳುವ ಕುರಿತು ಮನವೊಲಿಸಲು ತೀರ್ಮಾನಿಸಲಾಯಿತು.
ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಕೂಡಲಸಂಗಮ ಲಿಂಗಾಯತ ಪಂಚಮಸಾಲಿ ಪೀಠದ ಬಸವಜಯ ಮೃತ್ಯುಂಜಯ ಸ್ವಾಮೀಜಿ, ಮಲಪ್ರಭ ಅಚ್ಚುಕಟ್ಟು ಪ್ರದೇಶದಲ್ಲಿರುವ ಸರ್ವಪಕ್ಷಗಳ ಜನಪ್ರತಿನಿಧಿಗಳು ಸೇರಿ ಮಹದಾಯಿ ನೀರು ಯೋಜನೆ ವಿಚಾರವಾಗಿ ಗೋವಾ ಮತ್ತು ಮಹಾರಾಷ್ಟ್ರದ ಮುಖ್ಯಮಂತ್ರಿಗಳು ಹಾಗೂ ವಿರೋಧಪಕ್ಷಗಳ ನಾಯಕರನ್ನು ಭೇಟಿ ಮಾಡಿ ಮನವೊಲಿಸಲು ತೀರ್ಮಾನಿಸಲಾಗಿದೆ ಎಂದು ತಿಳಿಸಿದರು.