UK Suddi
The news is by your side.

ಕಳಸಾ- ಬಂಡೂರಿ ಯೋಜನೆ ಜಾರಿಗೆ ಪ್ರಧಾನಿಗೆ ಸಾವಿರಕ್ಕೂ ಹೆಚ್ಚು ಪತ್ರ

ಹುಬ್ಬಳ್ಳಿ: ಕಳಸಾ- ಬಂಡೂರಿ ಯೋಜನೆ ಜಾರಿಗೆ ಒತ್ತಾಯಿಸಿ ಕಳಸಾ- ಬಂಡೂರಿ ಹೋರಾಟಗಾರರ ಒಕ್ಕೂಟದ ನೇತೃತ್ವದಲ್ಲಿ ಹುಬ್ಬಳ್ಳಿಯಲ್ಲಿಂದು ಪ್ರಧಾನಿ ಮಂತ್ರಿಗಳಿಗೆ
ಒಂದು ಸಾವಿರಕ್ಕೂ ಹೆಚ್ಚು ಪತ್ರ ಬರೆಯಲಾಯಿತು. ಹುಬ್ಬಳ್ಳಿ ಚೆನ್ನಮ್ಮ ವೃತ್ತದಲ್ಲಿ ನಡೆದ ಪತ್ರ ಚಳವಳಿಗೆ ಶಂಖ ಊದುವ ಮೂಲಕ ಮುಖ್ಯಮಂತ್ರಿಗಳ ಸಂಸದೀಯ ಕಾರ್ಯದರ್ಶಿ ಸಿ.ಎಸ್‌.ಶಿವಳ್ಳಿ ಚಾಲನೆ ನೀಡಿದರು. ಜಿಲ್ಲಾ ಉಸ್ತುವಾರಿ ಸಚಿವ ವಿನಯ ಕುಲಕರ್ಣಿ, ಶಾಸಕರಾದ ಜಿ.ಎಸ್‌. ಪಾಟೀಲ, ಎನ್‌.ಎಚ್‌. ಕೋನರಡ್ಡಿ, ಪ್ರಸಾದ ಅಬ್ಬಯ್ಯ ಪತ್ರ ಚಳುವಳಿಯಲ್ಲಿ ಪಾಲ್ಗೊಂಡಿದ್ದರು. ರೈತರು, ವಿವಿಧ ಶಾಲೆಗಳ ವಿದ್ಯಾರ್ಥಿಗಳು, ವಿವಿಧ ಸಂಘಟನೆಗಳ ಕಾರ್ಯಕರ್ತರು ಹಾಗೂ ನಾಗರಿಕರು ಸೇರಿದಂತೆ 1000 ಕ್ಕೂ ಹೆಚ್ಚು ಪತ್ರ ಬರೆದು ಅಂಚೆ ಪೆಟ್ಟಿಗೆಗೆ ಹಾಕಿದರು.
For North Karnataka News visit www.uksuddi.in

Comments