UK Suddi
The news is by your side.

ಉ.ಕ. ಅಭಿವೃದ್ಧಿಗಾಗಿ ಜ.14ಕ್ಕೆ ಸಮಾವೇಶ

ಹುಬ್ಬಳ್ಳಿ:ಉತ್ತರ ಕರ್ನಾಟಕದ ಸರ್ವಾಂಗೀಣ ಅಭಿವೃದ್ಧಿ ಕುರಿತು ಚರ್ಚಿಸಲು ಜನವರಿ 14ರಂದು ಬೆಳಗ್ಗೆ 10.30ಕ್ಕೆ ನ್ಯೂ ಕಾಟನ್‌ ಮಾರ್ಕೆಟ್‌ನ ಸಾಂಸ್ಕೃತಿಕ ಭವನದಲ್ಲಿ ಸಮಾವೇಶ ನಡೆಯಲಿದೆ ಎಂದು ಉತ್ತರ ಕರ್ನಾಟಕ ಹಿತವರ್ಧಕ ಸಮಿತಿ ಸಂಚಾಲಕ ನಂದಕುಮಾರ ನಾಯ್ಡು ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ ಅವರು, ಸಮಾವೇಶದಲ್ಲಿ ನಿವೃತ್ತ ಲೋಕಾಯುಕ್ತ ನ್ಯಾಯಮೂರ್ತಿ ಸಂತೋಷ ಹೆಗ್ಡೆ, ಮಾಜಿ ಸಚಿವ ವೈಜನಾಥ ಪಾಟೀಲ, ಸಮಾಜ ಪರಿವರ್ತನ ಸಮುದಾಯ ಸಂಸ್ಥೆ ಸಂಸ್ಥಾಪಕ ಎಸ್‌.ಆರ್‌.ಹಿರೇಮಠ, ಶಾಸಕ ಅಶೋಕ ಖೇಣಿ ಆಗಮಿಸಲಿದ್ದು, ನಾಡೋಜ ಡಾ| ಪಾಟೀಲ ಪುಟ್ಟಪ್ಪ ಅಧ್ಯಕ್ಷತೆ ವಹಿಸಲಿದ್ದಾರೆ ಎಂದರು.

ಸಮಾವೇಶದಲ್ಲಿ ಉತ್ತರ ಕರ್ನಾಟಕದ ಸಮಸ್ಯೆಗಳು, ಅಭಿವೃದ್ಧಿ ಯೋಜನೆಗಳ ಕುರಿತು ಚಿಂತನ-ಮಂಥನ ನಡೆಯಲಿದೆ. ವಿಷಯ ತಜ್ಞರು, ಜನಪ್ರತಿನಿಧಿಗಳು ವಿಚಾರ ಮಂಡಿಸಲಿದ್ದಾರೆ. ಸಮಾವೇಶದಲ್ಲಿ ಉತ್ತರ ಕರ್ನಾಟಕಕ್ಕೆ ಆಗುತ್ತಿರುವ ಅನ್ಯಾಯ ವಿರುದ್ಧ ಠರಾವು ಪಾಸ್‌ ಮಾಡಲಾಗುವುದು ಎಂದು ತಿಳಿಸಿದರು.

For North Karnataka News visit www.uksuddi.in

Comments