UK Suddi
The news is by your side.

ಶಿಶುನಾಳ ಶರೀಫರು

ಶಿಶುನಾಳ ಶರೀಫರು ಹಾವೇರಿ ಜಿಲ್ಲೆಯ ಶಿಗ್ಗಾವಿ ತಾಲೂಕಿನ ಶಿಶುನಾಳ ಗ್ರಾಮದಲ್ಲಿ ಕ್ರಿ.ಶ. ೧೮೧೯ ಮಾರ್ಚ ೭ರಂದು ಜನಿಸಿದರು. ಇವರ ತಂದೆ ದೇವಕಾರ ಮನೆತನದ ಇಮಾಮ ಹಜರತ ಸಾಹೇಬರು ಹಾಗು ತಾಯಿ ಹಜ್ಜೂಮಾ. ಇವರ ಪೂರ್ಣ ಹೆಸರು ಮಹಮ್ಮದ ಶರೀಫ.ಮುಲ್ಕಿ ಪರೀಕ್ಷೆ ಪಾಸು ಮಾಡಿದ ಬಳಿಕ ಶರೀಫರು ಕೆಲ ಕಾಲ ಪ್ರಾಥಮಿಕ ಶಾಲೆಗಳಲ್ಲಿ ಶಿಕ್ಷಕರೆಂದು ಕೆಲಸ ಮಾದಿದರು. ಆದರೆ ಮುಂದೆ ಈ ಕೆಲಸವನ್ನು ಬಿಟ್ಟು ಬಿಟ್ಟರು. ಈ ಸಮಯದಲ್ಲಿ ಶರೀಫರಿಗೆ ಕಳಸದ ಗುರು ಗೋವಿಂದಭಟ್ಟರಿಂದ ಅನುಗ್ರಹವಾಯಿತು. ಮಗನು ಕೆಲಸವನ್ನು ಬಿಟ್ಟು ಆಧ್ಯ್ಶಾತ್ಮಚಿಂತನೆಯಲ್ಲಿ ತೊಡಗಿಸಿಕೊಂಡದ್ದರಿಂದ ಶರೀಫರ ತಂದೆ ತಾಯಿ ಅವರಿಗೆ ಕುಂದಗೋಳ ನಾಯಕ ಮನೆತನದ ಫಾತಿಮಾ ಎಂಬ ಕನ್ಯೆಯೊಂದಿಗೆ ಮದುವೆ ಮಾಡಿದರು.

ಕೆಲವು ಸಮಯದ ನಂತರ ಇವರಿಗೆ ಒಂದು ಹೆಣ್ಣು ಮಗು ಜನಿಸಿತು.ದುರ್ದೈವದಿಂದ ಕೆಲವು ತಿಂಗಳುಗಳಲ್ಲಿ ಹೆಂಡತಿ ತೀರಿಕೊಂಡರು.ಶರೀಫರಿಗೆ ಜೀವನದಲ್ಲಿ ಬೇಸರವಾದರೂ, ದೇವರಲ್ಲಿ ನಂಬಿಕೆ ಉಳಿದಿತ್ತು.ಶರೀಫರು ಆ ಬಳಿಕ ತಮ್ಮ ಜೀವನವನ್ನು ಆಧ್ಯಾತ್ಮಸಾಧನೆಗೆ ಮುಡಿಪಿಟ್ಟರು.ತಾಳ್ಮೆಯಿಂದ ಸಜ್ಜನರ ಹಾಗೂ ವಿದ್ಯಾವಂತರ ಸಹವಾಸದಲ್ಲಿಯೇ ಕಾಲ ಕಳೆಯುತ್ತಾ ಬಂದರು. ತಮಗೆ ಸರಿಯಾಗಿ ಮಾರ್ಗದರ್ಶನ ನೀಡುವಂತಹ ಗುರುವಿಗಾಗಿ ಅವರು ಊರೂರು ಅಲೆದರು. ಕೊನೆಗೆ ಗೋವಿಂದ ಭಟ್ಟ ಎಂಬ ಗುರುವಿನಲ್ಲಿ ಸರಿಯಾದ ಮಾರ್ಗದರ್ಶನ ದೊರೆಯಿತು. ಯಾವುದೇ ಮತತ ಬಗ್ಗೆ ಮೂಡನಂಬಿಕೆ ಇಲ್ಲದ ಈ ಗುರುಗಳು ಶರೀಫರಿಗೆ ತುಂಬಾ ಮೆಚ್ಚುಗೆಯಾದರು. ಗುರುಶಿಷ್ಯರಿಬ್ಬರೂ ಮಸೀದಿಗಳಿಗೆ, ದೇವಾಲಯಗಳಿಗೆ ಸಂದರ್ಶನಕ್ಕಾಗಿ ಹೊರಟರು. ಶರೀಫರು ಅನೇಕ ಹಾಡುಗಳನ್ನು ರಚಿಸಿ ಹಾಡಿದರು. ಈ ಗುರುಗಳ ಜೊತೆಗೆ ನವಲಗುಂದದ ನಾಗಲಿಂಗಮತಿ ಮತ್ತು ಗಂಗೆಯ ಮಡಿವಾಳಪ್ಪ ಎಂಬುವರು ಸಹ ಶರೀಫರ ಮೇಲೆ ಹೆಚ್ಚಿನ ಪರಿಣಾಮ ಬೀರಿದರು.”ನಮನ”

ಶರೀಫರ ಮರಣದ ತರುವಾಯ ಅವರ ಅಂತ್ಯಕ್ರಿಯೆಯು ಹಿಂದು ಹಾಗು ಮುಸಲ್ಮಾನ ಭಕ್ತರ ಸಮ್ಮುಖದಲ್ಲಿ ನೆರವೇರಿತು. ಶರೀಫರು ಹಾಡಿದ ಪದಗಳು ಧಾರವಾಡ ಜಿಲ್ಲೆಯ ಆಡುಭಾಷೆಯ ಶೈಲಿಯಲ್ಲಿವೆ. ಈ ಪದಗಳಲ್ಲಿ ಕೆಲವು ದೇವತಾಸ್ತುತಿಯ ಪದಗಳಾದರೆ, ಇನ್ನು ಕೆಲವು ಪದಗಳು ತತ್ವಬೋಧನೆಯ ಪದಗಳಾಗಿವೆ.ಹೆಚ್ಚಿನ ಪದಗಳು ಕನ್ನಡದಲ್ಲಿ ಇದ್ದರೂ ಸಹ ಕೆಲವು ಪದಗಳು ಉರ್ದು ಭಾಷೆಯಲ್ಲಿವೆ. ಕನ್ನಡದ ಖ್ಯಾತ ಹಾಡುಗಾರ ಶ್ರೀ ಅಶ್ವಥ್ಥರು ಇವರ ಅನೇಕ ಪದಗಳನ್ನು ಹಾಡಿದ್ದಾರೆ. (ಆಕರ: “ಬರಕೋ ಪದಾ ಬರಕೋ” ಸಂಪಾದನೆ: ಡಾ| ಶಿವಾನಂದ ಗುಬ್ಬಣ್ಣವರ)

For North Karnataka News visit www.uksuddi.in

Comments