SDA ಫಲಿತಾಂಶ ಪ್ರಕಟ
ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್ಸಿ) ವತಿಯಿಂದ ನಡೆಸಲಾಗಿದ್ದ ಎಸ್ಡಿಎ (ದ್ವಿತೀಯ ದರ್ಜೆ ಸಹಾಯಕ) ಪರೀಕ್ಷೆಯ ಫಲಿತಾಂಶ ಘೋಷಣೆಯಾಗಿದೆ. 2,226 ಹುದ್ದೆಗಳಿಗೆ ಮೂಲ ದಾಖಲೆಗಳ ಪರಿಶೀಲನೆಗೆ 1:2 ಅನುಪಾತದಲ್ಲಿ ಅರ್ಹ ಅಭ್ಯರ್ಥಿಗಳ ಪಟ್ಟಿ ಪ್ರಕಟಿಸಲಾಗಿದ್ದು, ಒಟ್ಟು 7,74,483 ಅಭ್ಯರ್ಥಿಗಳು ಅರ್ಜಿ ಸಲ್ಲಿಸಿದ್ದರು. ಪರೀಕ್ಷೆಗೆ 5,90,261 ಅಭ್ಯರ್ಥಿಗಳು ಹಾಜರಾಗಿದ್ದರು. ಅರ್ಹ ಅಭ್ಯರ್ಥಿಗಳ ಮೂಲ ದಾಖಲೆಗಳ ಪರಿಶೀಲನೆ ಜೂ.13ರಿಂದ ಆರಂಭವಾಗುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ.
ಪರಿಶೀಲನೆ ಮುಂದಕ್ಕೆ
ಪ್ರಥಮ ದರ್ಜೆ ಸಹಾಯಕರ (ಎಫಡಿಎ) ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳ ಜೂ.2ರಂದು ನಡೆಯಬೇಕಿದ್ದ ಮೂಲ ದಾಖಲೆಗಳ ಪರಿಶೀಲನೆ ಜೂ.6ಕ್ಕೆ ಮುಂದೂಡಲಾಗಿದೆ. ಜೂ.2ಕ್ಕೆ ಸರ್ಕಾರಿ ನೌಕರರ ಮುಷ್ಕರದ ಹಿನ್ನೆಲೆಯಲ್ಲಿ ಮುಂಜಾಗೃತ ಕ್ರಮವಾಗಿ ಜೂ.2ರಂದು ನಡೆಯಬೇಕಿದ್ದ ಅರ್ಹ ಅಭ್ಯರ್ಥಿಗಳ ಮೂಲ ದಾಖಲೆಗಳ ಪರಿಶೀಲನೆ ಜೂ.6ಕ್ಕೆ ನಡೆಸಲಾಗುವುದು ಎಂದು ಕರ್ನಾಟಕ ಲೋಕಸೇವಾ ಆಯೋಗದ ಪ್ರಕಟಣೆ ತಿಳಿಸಿದೆ.