ಮುಂದಿನ 4–5 ದಿನಗಳಲ್ಲಿ ರಾಜ್ಯಕ್ಕೆ ಮುಂಗಾರು
ಉತ್ತರ ಕೇರಳದ ಕೆಲವು ಜಿಲ್ಲೆಗಳಲ್ಲಿ ಗುರುವಾರ ಭಾರಿ ಮಳೆಯಾಗಿದೆ. ಕೇರಳಕ್ಕೆ ಮುಂಗಾರು ಪ್ರವೇಶಕ್ಕೆ ಅಗತ್ಯವಾದ ವಾತಾವರಣ ಸೃಷ್ಟಿಯಾಗಿದೆ. ಮುಂದಿನ 4–5 ದಿನಗಳಲ್ಲಿ ರಾಜ್ಯಕ್ಕೆ ಮುಂಗಾರು ಪ್ರವೇಶಿಸಲಿದೆ ಎಂದು ತಿರುವನಂತಪುರದ ಹವಾಮಾನ ಕೇಂದ್ರ ತಿಳಿಸಿದೆ.
ಜೂನ್ 6ರವರೆಗೆ ಕೇರಳದಲ್ಲಿ ಭಾರಿ ಮಳೆಯಾಗಬಹುದು ಎಂಬ ಮುನ್ನೆಚ್ಚರಿಕೆಯನ್ನು ಹವಾಮಾನ ಕೇಂದ್ರ ನೀಡಿದೆ. ಸಮುದ್ರದಲ್ಲಿ 45–55 ಕಿ.ಮೀ ವೇಗದಲ್ಲಿ ಗಾಳಿ ಬೀಸುತ್ತಿದ್ದು ಮೀನುಗಾರರಿಗೆ ಎಚ್ಚರಿಕೆ ನೀಡಲಾಗಿದೆ.
ಜೂನ್ 7ರಂದು ಕೇರಳಕ್ಕೆ ಮುಂಗಾರು ಪ್ರವೇಶಿಸಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಈಗಾಗಲೇ ಮುನ್ಸೂಚನೆ ನೀಡಿದೆ.