UK Suddi
The news is by your side.

ಜುಲೈ 23ರಂದು ಧಾರವಾಡ ಐಐಟಿ ಕಾರ್ಯಾರಂಭ

ಧಾರವಾಡ: ಇಲ್ಲಿನ ವಾಲ್ಮಿಯಲ್ಲಿ ಐಐಟಿ ತಾತ್ಕಾಲಿಕ ಕ್ಯಾಂಪಸ್ನ ನವೀಕರಣ ಕಾರ್ಯ ಭರದಿಂದ ಸಾಗಿದ್ದು, ತಿಂಗಳಾಂತ್ಯಕ್ಕೆ ಮುಕ್ತಾಯವಾಗಲಿದೆ. ಜುಲೈ 23ಕ್ಕೆ ಐಐಟಿ ಕಾರ್ಯಾರಂಭ ಮಾಡಲಿದೆ ಎಂದು ಜಿಲ್ಲಾಧಿಕಾರಿ ರಾಜೇಂದ್ರ ಚೋಳನ್ ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಂಬೈ ಐಐಟಿ ತಂಡದ ಮಾರ್ಗದರ್ಶನದಲ್ಲಿ ತಾತ್ಕಾಲಿಕ ಕ್ಯಾಂಪಸ್ ಕಾರ್ಯ ಪ್ರಗತಿಯಲ್ಲಿದೆ. ಈ ಮಾಸಾಂತ್ಯಕ್ಕೆ ತಾತ್ಕಾಲಿಕ ಕ್ಯಾಂಪಸ್ಅನ್ನು ಹಸ್ತಾಂತರಿಸಲಾಗುವುದು ಎಂದು ತಿಳಿಸಿದರು.

Comments