UK Suddi
The news is by your side.

ಬೆಳಗಾವಿಯಲ್ಲಿ ಮುಂಗಾರು ಅಧಿವೇಶನ

ಬೆಳಗಾವಿ: ಸುವರ್ಣ ವಿಧಾನಸೌಧದಲ್ಲಿ ಮುಂಗಾರು ಅಧಿವೇಶನ ನಡೆಸಲು ವಿಧಾನ ಪರಿಷತ್ ಚುನಾವಣೆ ಬಳಿಕ ಸರ್ವಪಕ್ಷಗಳ ಸಭೆ ಕರೆದು ನಿರ್ಧಾರ ಕೈಗೊಳ್ಳಲಾಗುವುದು ಎಂದು ಮುಖ್ಯ ಸಚೇತಕ ಅಶೋಕ ಪಟ್ಟಣ ಹೇಳಿದ್ದಾರೆ.

ಈ ಬಗ್ಗೆ ಸರ್ಕಾರದ ಮಟ್ಟದಲ್ಲಿ ಚರ್ಚೆಗಳು ನಡೆಯುತ್ತಿವೆ. ಬರದಿಂದ ತತ್ತರಿಸಿದ ಉತ್ತರ ಕರ್ನಾಟಕದ ಸಮಗ್ರ ಅಭಿವೃದ್ಧಿಗೆ ಪ್ರಯತ್ನಿಸುತ್ತಿರುವ ಸರ್ಕಾರ, ಅದಕ್ಕೆ ಪೂರಕವಾಗಿ ಬೆಳಗಾವಿಯಲ್ಲಿ ಅಧಿವೇಶನ ನಡೆಸಿ ರ್ಚಚಿಸಲು ನಿರ್ಧರಿಸಿದೆ ಎಂದು ಅಶೋಕ ಪಟ್ಟಣ ಸ್ಪಷ್ಟಪಡಿಸಿದರು.

Comments