ಸಂಜೆ ವೇಳೆಗೆ ರಾಜೀನಾಮೆ ನೀಡದಿದ್ದರೆ ಆಡಿಯೋ ಕ್ಲಿಪ್ ಬಿಡುಗಡೆ
ಬಳ್ಳಾರಿ: ಸಂಜೆ 5ರ ವೇಳೆಗೆ ರಾಜೀನಾಮೆ ನೀಡದಿದ್ದರೆ ಆಡಿಯೋ ಕ್ಲಿಪ್ ಬಿಡುಗಡೆ ಮಾಡಲಾಗುವುದು ಎಂದು ಉಸ್ತುವಾರಿ ಸಚಿವ ಪರಮೇಶ್ವರ ನಾಯ್ಕಗೆ ಅವರಿಗೆ ಕೂಡ್ಲಿಗಿ ಉಪವಿಭಾಗದ ಡಿವೈಎಸ್ಪಿ ಹುದ್ದೆಗೆ ರಾಜೀನಾಮೆ ನೀಡಿರುವ ಅನುಪಮಾ ಶೆಣೈ ಅವರು ಎಚ್ಚರಿಕೆ ನೀಡಿದ್ದಾರೆ ಎಂಬ ಸುದ್ದಿ ಈಗ ಚರ್ಚೆಗೆ ಗ್ರಾಸವಾಗಿದೆ.
ಈ ಕುರಿತು ಅನುಪಮಾ ಅವರು ಮಾಹಿತಿ ನೀಡಿದ್ದಾರೆ ಎಂದು ಖಾಸಗಿ ವಾಹಿನಿಗಳು ಸುದ್ದಿ ಪ್ರಸಾರ ಮಾಡುತ್ತಿವೆ.