UK Suddi
The news is by your side.

ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉಚಿತ ತರಬೇತಿ

ಬೆಂಗಳೂರು: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯು ಪ್ರಸಕ್ತ ಸಾಲಿನ ಐಎಎಸ್, ಕೆಎಎಸ್ ಮತ್ತು ಬ್ಯಾಂಕಿಂಗ್ ಸ್ಪರ್ಧಾತ್ಮಕ ಪರೀಕ್ಷೆಗಳ ಉಚಿತ ಪರೀಕ್ಷಾ ಪೂರ್ವ ತರಬೇತಿಗೆ, ಹಿಂದುಳಿದ ವರ್ಗಗಳ ಪ್ರವರ್ಗ-1, 2 (ಎ), 3(ಎ) ಹಾಗೂ 3(ಬಿ) ಗಳಿಗೆ ಸೇರಿದ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಆಸಕ್ತರು ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸಲು ಜುಲೈ 10 ಕಡೆಯ ದಿನಾಂಕವಾಗಿದ್ದು, ಹೆಚ್ಚಿನ ವಿವರಗಳಿಗೆwww.backwardclasses.kar.nic.in ವೆಬ್‍ಸೈಟ್ ಹಾಗೂ ಮೊಬೈಲ್ ಸಂಖ್ಯೆ: 9480818013, 948018010 ದೂ.ಸಂ: 080-44554444 ಅನ್ನು ಸಂಪರ್ಕಿಸಬಹುದು ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Comments