UK Suddi
The news is by your side.

ಹುತಾತ್ಮ ಪಿಎಸ್ಐ ಮಲ್ಲಿಕಾರ್ಜುನ್ ಪತ್ನಿ ನಿಧನ

mallamma n mallikarjun

ಕಲಬುರಗಿ:  ಹುತಾತ್ಮ ಪಿಎಸ್ ಐ ಮಲ್ಲಿಕಾರ್ಜುನ ಬಂಡೆ ಅವರ ಪತ್ನಿ ಮಲ್ಲಮ್ಮ ಶನಿವಾರ ಬೆಳಗಿನ ಜಾವ ಮೃತಪಟ್ಟಿದ್ದಾರೆ.

ಮೆದುಳು ಕ್ಯಾನ್ಸರ್​ನಿಂದ ಬಳಲುತ್ತಿದ್ದ ಮಲ್ಲಮ್ಮ  (40) ಶನಿವಾರ ಬೆಳಗ್ಗೆ 5 ಗಂಟೆ ಸುಮಾರಿಗೆ ತಮ್ಮ ಸಹೋದರಿಯ ಮನೆಯಲ್ಲಿ ಮೃತಪಟ್ಟಿದ್ದಾರೆ. 

ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಲ್ಲಿ ಮೇಲ್ವಿಚಾರಕಿಯಾಗಿ  ಮಲ್ಲಮ್ಮ ಅವರು ಕೆಲಸ ಮಾಡುತ್ತಿದ್ದರು. ಮಲ್ಲಿಕಾರ್ಜುನ ಬಂಡೆ, ಮಲ್ಲಮ್ಮ ದಂಪತಿಗೆ ಶಿವಾನಿ ಮತ್ತು ಸಾಯಿ ಎಂಬ ಇಬ್ಬರು ಮಕ್ಕಳಿದ್ದು, ತಂದೆ-ತಾಯಿಯನ್ನು ಕಳೆದುಕೊಂಡು ಅನಾಥರಾಗಿದ್ದಾರೆ .ಇಂದು ಸಂಜೆ ಮಲ್ಲಮ್ಮ ಅವರ ಅಂತ್ಯಕ್ರಿಯೆ ನಡೆಯಲಿದೆ.

2014ರಲ್ಲಿ ​ಕಲಬುರಗಿಯಲ್ಲಿ ಶಾರ್ಪ್ ಶೂಟರ್ ಮುನ್ನಾನೊಂದಿಗೆ ನಡೆದ ಗುಂಡಿನ ಚಕಮಕಿಯಲ್ಲಿ ಪಿಎಸ್ ಐ ಮಲ್ಲಿಕಾರ್ಜುನ ಬಂಡೆ ಮೃತಪಟ್ಟಿದ್ದರು.

Comments