UK Suddi
The news is by your side.

ಗದಗ್: ಬಸ್ ಪಲ್ಟಿಯಾಗಿ ಕಂದಕಕ್ಕೆ; 30 ಮಂದಿಗೆ ಗಾಯ

1462703289-9705

 ಖಾಸಾಗಿ ಬಸ್ಸೊಂದು ಪಲ್ಟಿಯಾದ ಪರಿಣಾಮ 30ಕ್ಕೂ ಅಧಿಕ ಮಂದಿಗೆ ತೀವ್ರ ಗಾಯಗಳಾಗಾದ ಘಟನೆ ಜಿಲ್ಲೆಯಲ್ಲಿ ಭಾನುವಾರ ಸಂಭವಿಸಿದೆ. 

ಆಂಧ್ರದಿಂದ ಗೋಕರ್ಣಕ್ಕೆ ತೆರಳುತ್ತಿದ್ದ ವೇಳೆ ಈ ಅವಘಡ ಸಂಭವಿಸಿದೆ ಎನ್ನಲಾಗಿದೆ. ಗಾಯವಾದ  30 ಮಂದಿಯ ಪೈಕಿ ಏಳು ಮಂದಿಯ ಸ್ಥಿತಿ ಗಂಭೀರವಾಗಿದೆ. ಗದಗ ಜಿಲ್ಲೆಯ ಹುಲಕೋಟಿ ಬಳಿ ಖಾಸಗಿ ಬಸ್ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿ ಹೊಡೆಯಿತೆಂದು ತಿಳಿದುಬಂದಿದೆ.

ರಸ್ತೆಯಿಂದ ಉರುಳಿ ಪಕ್ಕದ ಕಂದಕಕ್ಕೆ ಬಸ್ ಬಿದ್ದಿದ್ದರಿಂದ ಈ ಘಟನೆ ಸಂಭವಿಸಿದೆ. ಈ ಅಪಘಾತಕ್ಕೆ ಚಾಲಕನ ನಿರ್ಲಕ್ಷ್ಯವೇ ಕಾರಣವೆಂದು ಹೇಳಲಾಗುತ್ತಿದೆ.

ತಿರುವಿನಲ್ಲಿ ವೇಗವಾಗಿ ಬಸ್ ಚಾಲನೆ ಮಾಡಿದ್ದೇ ಬಸ್ ಪಲ್ಟಿ ಹೊಡೆದು ಪಕ್ಕದ ಕಂದಕಕ್ಕೆ ಬಿದ್ದಿದೆ ಎಂದು ಪೊಲೀಸರು ತಿಳಿಸಿದ್ದಾರೆ. 

ಗಾಯಾಳುಗಳನ್ನು ಗದಗ ಜಿಲ್ಲಾಸ್ಪತ್ರೆಗೆ ಸೇರಿಸಲಾಗಿದೆ. ಅದೃಷ್ಟವಶಾತ್ ಎಲ್ಲರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ. 

Comments