UK Suddi
The news is by your side.

ವಿಶ್ವಸಂಸ್ಥೆಯಲ್ಲಿ ಪಾಕ್​ಗೆ ತಿರುಗೇಟು ನೀಡಿದ ಭಾರತ

1 Indo Pak web

ವಿಶ್ವಸಂಸ್ಥೆ: ಜಮ್ಮು ಮತ್ತು ಕಾಶ್ಮೀರದಲ್ಲಿ ನಡೆಯುತ್ತಿರುವ ಹಿಂಸಾಚಾರ ಮತ್ತು ಉಗ್ರ ಬುರ್ಹಾನ್ ವನಿ ಹತ್ಯೆ ಕುರಿತು ವಿಶ್ವಸಂಸ್ಥೆಯಲ್ಲಿ ಪಾಕಿಸ್ತಾನ ನೀಡಿದ ಹೇಳಿಕೆಗೆ ಭಾರತ ಇಂದು ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ್ದು, ಪಾಕಿಸ್ತಾನ ಭಾರತದ ವಿರುದ್ಧ ಉಗ್ರರನ್ನು ಉಪಯೋಗಿಸುತ್ತಿದೆ ಎಂದು ಪಾಕ್​ಗೆ ತಿರುಗೇಟು ನೀಡಿದೆ.

ಪಾಕಿಸ್ತಾನ ಉಗ್ರರ ಒಳ್ಳೆಯತನವನ್ನು ಜಪಿಸುತ್ತಿದೆ. ಪಾಕಿಸ್ತಾನ ವಿಶ್ವಸಂಸ್ಥೆಯನ್ನು ದುರುಪಯೋಗ ಪಡಿಸಿಕೊಂಡು ಭಾರತದ ವಿರುದ್ಧ ಆರೋಪ ಹೊರಿಸುತ್ತಿದೆ. ಪಾಕಿಸ್ತಾನ ಮತ್ತು ಉಗ್ರರ ಸಂಬಂಧವನ್ನು ಗಣನೆಗೆ ತೆಗೆದುಕೊಂಡರೆ ಪಾಕಿಸ್ತಾನವನ್ನು ವಿಶ್ವಸಂಸ್ಥೆಯ ಮಾನವ ಹಕ್ಕುಗಳ ಮಂಡಳಿಯಿಂದ ಹೊರಗಿಡಬೇಕಾಗುತ್ತದೆ ಎಂದು ವಿಶ್ವಸಂಸ್ಥೆಯ ಭಾರತದ ರಾಯಭಾರಿ ಸಯ್ಯದ್ ಅಕ್ಬರುದ್ದೀನ್ ಪಾಕ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಬುಧವಾರ ಪಾಕಿಸ್ತಾನದ ರಾಯಭಾರಿ ಲೋಧಿ ಭಾರತೀಯ ಸೇನೆ ಬರ್ಹಾನ್ ವನಿಯನ್ನು ಕಾನೂನು ಬಾಹಿರವಾಗಿ ಹತ್ಯೆ ಮಾಡಿದೆ. ಆತ ಕಾಶ್ಮೀರದ ರಾಜಕೀಯ ನಾಯಕ, ಆತನ ಹತ್ಯೆಯಿಂದ ಜಮ್ಮು ಮತ್ತು ಕಾಶ್ಮೀರದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ ಎಂದು ವಿಶ್ವಸಂಸ್ಥೆ ಮಾನವ ಹಕ್ಕುಗಳ ಮಂಡಳಿಯಲ್ಲಿ ತಿಳಿಸಿದ್ದರು.

ಭಾರತ-ಪಾಕ್ ಮಾತುಕತೆಗೆ ಬಾನ್ ಕಿ ಮೂನ್ ಆಹ್ವಾನ

ವಿಶ್ವಸಂಸ್ಥೆ ಜಮ್ಮು ಮತ್ತು ಕಾಶ್ಮೀರ ಪರಿಸ್ಥಿತಿ ಕುರಿತು ನಿಗಾವಹಿಸಿದೆ. ಭಾರತ ಮತ್ತು ಪಾಕಿಸ್ತಾನ ನೇರವಾಗಿ ಮಾತುಕತೆ ನಡೆಸಲು ವಿಶ್ವಸಂಸ್ಥೆ ಪ್ರಧಾನ ಕಾರ್ಯದರ್ಶಿ ಸದಾ ಆಹ್ವಾನ ನೀಡಿದ್ದಾರೆ. ಭಾರತ ಮತ್ತು ಪಾಕಿಸ್ತಾನ ಮಾತುಕತೆ ಮೂಲಕ ಸಮಸ್ಯೆಯನ್ನು ಪರಿಹರಿಸಿಕೊಳ್ಳಬಹುದು ಎಂದು ಬಾನ್ ಕಿ ಮೂನ್ ಅವರ ವಕ್ತಾರರು ತಿಳಿಸಿದ್ದಾರೆ.

Comments