ಕಳೆದ ವಾರ ಮಹಾರಾಷ್ಟ್ರದ ವಿವಿಧ ಅಣೆಕಟ್ಟೆಗಳಿಂದ ಭಾರಿ ಪ್ರಮಾಣದಲ್ಲಿ ನೀರು ಬಿಟ್ಟ ಪರಿಣಾಮ, ಆಲಮಟ್ಟಿ ಜಲಾಶಯ ಬಹುತೇಕ ಭರ್ತಿಯಾಗಿದೆ. ಕೃಷ್ಣಾ ಅಚ್ಚುಕಟ್ಟು ಪ್ರದೇಶ ವ್ಯಾಪ್ತಿಯ ಕಾಲುವೆಗಳಿಗೆ ಭಾನುವಾರ ಮಧ್ಯಾಹ್ನ ದಿಂದಲೇ 625 ಕ್ಯುಸೆಕ್ ನೀರು ಬಿಡಲಾಗುತ್ತಿದೆ. ಜಲಾಶಯದಲ್ಲಿ ಭಾನುವಾರ 518. 90 ಮೀಟರ್ ನೀರು ಇತ್ತು. ಗರಿಷ್ಠ ಮಟ್ಟ 519.60 ಮೀಟರ್.