ನವಲಗುಂದ ರೈತರ ಮೇಲೆ ಲಾಠಿಚಾರ್ಜ್ : 6 ಮಂದಿ ಪೊಲೀಸ್ ಪೇದೆಗಳು ಸಸ್ಪೆಂಡ್
ಬೆಳಗಾವಿ: ನವಲಗುಂದದಲ್ಲಿ ರೈತರ ಮೇಲೆ ಲಾಠಿಜಾರ್ಜ್ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರು ಮಂದಿ ಪೊಲೀಸ್ ಪೇದೆಗಳನ್ನು ಅಮಾನತು ಮಾಡಲಾಗಿದೆ.ನವಲಗುಂದದ ಇಬ್ಬರು, ಬೆಳಗಾವಿ ಜಿಲ್ಲೆಯ ಇಬ್ಬರು, ವಿಜಯಪುರ ಜಿಲ್ಲೆಯ ಇಬ್ಬರು ಸೇರಿ ಒಟ್ಟು ಆರು ಮಂದಿ ಪೊಲೀಸ್ ಪೇದೆಗಳನ್ನು ಅಮಾನತು ಮಾಡಲಾಗಿದೆ. ಆದರೆ ಸದ್ಯ ಪೊಲೀಸ್ ಪೇದೆಗಳ ಹೆಸರುಗಳನ್ನು ಬಹಿರಂಗಪಡಿಸೋದಿಲ್ಲ ಎಂದು ಪೊಲೀಸ್ ವರಿಷ್ಠಾಧಿಕಾರಿ ಧರ್ಮೇಂದ್ರ ಕುಮಾರ್ ಮೀನಾ ತಿಳಿಸಿದ್ದಾರೆ.ಜುಲೈ 30 ರಂದು ಮಹದಾಯಿ ನ್ಯಾಯಾಧಿಕರಣದ ತೀರ್ಪು ವಿರೋಧಿಸಿ ನಡೆಸಿದ ಪ್ರತಿಭಟನೆಯ ಸಂದರ್ಭದಲ್ಲಿ ಯಮನೂರು ಗ್ರಾಮಸ್ಥರ ಮೇಲೆ ಪೊಲೀಸರು ನಡೆಸಿದ ದೌರ್ಜನ್ಯ ಪ್ರಕರಣ ದೊಡ್ಡ ವಿವಾದಕ್ಕೆ ಕಾರಣವಾಗಿತ್ತು.