ಜಾಗ್ವಾರ್ ದರ್ಬಾರ್ ಆರಂಭ
ಬೆಂಗಳೂರು: ಮಾಜಿ ಸಿ.ಎಂ.ಕುಮಾರಸ್ವಾಮಿ ಅವರ ಪುತ್ರ ನಿಖಿಲ್ ಕುಮಾರ್ ಅಭಿನಯದ ಈ ವರ್ಷದ ಬಹುನಿರೀಕ್ಷಿತ ‘ಜಾಗ್ವಾರ್’ ಇಂದು ವಿಶ್ವದಾದ್ಯಂತ ತೆರೆಕಂಡಿದ್ದು, ಮೊದಲ ಶೋಗೆ ಪ್ರೇಕ್ಷಕರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ಜಾಗ್ವಾರ್ ಏಕಕಾಲಕ್ಕೆ ಸ್ಯಾಂಡಲ್ವುಡ್ ಮತ್ತು ಟಾಲಿವುಡ್ನಲ್ಲಿ ಬಿಡುಗಡೆಯಾಗಿದೆ. ಸಂತೋಷ್ ಚಿತ್ರ ಮಂದಿರದ ಬಳಿ ಬೆಳಗ್ಗೆಯಿಂದಲೇ ಅಭಿಮಾನಿಗಳು ನೆರೆದಿದ್ದು, ನಿಖಿಲ್ ಅಭಿನಯದ ಮೊದಲ ಚಿತ್ರವನ್ನು ಕಣ್ತುಂಬಿಕೊಳ್ಳಲು ಕಾತರದಿಂದ ಕಾಯುತ್ತಿದ್ದಾರೆ.
- ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಸಂತೋಷ್ ಚಿತ್ರಮಂದಿರಕ್ಕೆ ತಲುಪಿದ್ದು, ತಮ್ಮ ಮೊಮ್ಮಗ ನಿಖಿಲ್ ಜತೆಯಲ್ಲಿ ಚಿತ್ರ ವೀಕ್ಷಿಸುತ್ತಿದ್ದಾರೆ.
- ಜಾಗ್ವಾರ್ ಚಿತ್ರದ ಯಶಸ್ಸಿಗಾಗಿ ಜೆಡಿಎಸ್ ಶಾಸಕ ಜಿ.ಟಿ.ದೇವೇಗೌಡರಿಂದ ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಕೆ.
ಇಂಧನ ಸಚಿವ ಡಿ.ಕೆ.ಶಿವಕುಮಾರ್ ಜಾಗ್ವಾರ್ ಸಿನಿಮಾಕ್ಕೆ ಶುಭ ಹಾರೈಸಿದ್ದಾರೆ. ಜತೆಗೆ ನಿಖಿಲ್ ಸಿನಿಮಾ ರಂಗದಲ್ಲಿ ಇನ್ನು ಎತ್ತರಕ್ಕೆ ಬೆಳೆಯಲಿ, ಒಳ್ಳೆಯ ನಟನಾಗಿ ಜನ ಮನ್ನಣೆ ಪಡೆಯಲಿ ಎಂದು ತಿಳಿಸಿದ್ದಾರೆ.