UK Suddi
The news is by your side.

ಇಂಡಿಕಾ ಕಾರು-ಲಾರಿ ನಡುವೆ ಭೀಕರ ಅಪಘಾತ:  4 ಸಾವು


ಬೆಳಗಾವಿ: ಇಂಡಿಕಾ ಕಾರು ಹಾಗೂ ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಮಗು ಸೇರಿ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಸೋಮವಾರದಂದು ನಡೆದಿದೆ.

ಬಾಗಲಕೋಟೆಯಿಂದ ಬೆಳಗಾವಿಗೆ ಕಾರಿನಲ್ಲಿ ತೆರಳುತ್ತಿದ್ದಾಗ  ಈ ಅಪಘಾತ ಸಂಭವಿಸಿದ್ದು ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೃತರೆಲ್ಲಾ ಬೆಳಗಾವಿ ಜಿಲ್ಲೆಯ ಕಾಕಲಾತಿ ಗ್ರಾಮದ ನಿವಾಸಿಗಳು ಎಂದು ಗುರುತಿಸಲಾಗಿದೆ.

 ಮಾರಿಹಾಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿಈ ಘಟನೆ ನಡೆದಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡು ವಿಚಾರಣೆ ನಡೆಸುತ್ತಿದ್ದಾರೆ.

Comments