UK Suddi
The news is by your side.

ಲಾರಿ-ಬಸ್ ಡಿಕ್ಕಿ: ಮೂವರು ಸಾವು

accidentt-31-1472614386

ರಾಯಚೂರು: ಸರ್ಕಾರಿ ಸಾರಿಗೆ ಬಸ್ ಹಾಗೂ ಲಾರಿ ಮುಖಾಮುಖಿ ಡಿಕ್ಕಿಯಾಗಿ ಮೂವರು ಸ್ಥಳದಲ್ಲೇ ಮೃತಪಟ್ಟ ಘಟನೆ ಶುಕ್ರವಾರದಂದು ನಡೆದಿದೆ.

ರಾಯಚೂರು ಜಿಲ್ಲೆ ಮಾನ್ವಿ ತಾಲ್ಲೂಕಿನ ಕಲ್ಲೂರು ಗ್ರಾಮದ ಸಮೀಪ ವೇಗವಾಗಿ ಬಂದ ಲಾರಿ ಹಾಗೂ ಬಸ್ ಮುಖಾಮುಖಿ ಡಿಕ್ಕಿಯಾಗಿದ್ದು, ಸ್ಥಳದಲ್ಲೇ ಲಾರಿ ಚಾಲಕ ಹಾಗೂ ಬಸ್ ನಲ್ಲಿದ್ದ ಇಬ್ಬರು ಮೃತಪಟ್ಟಿದ್ದಾರೆ. ಘಟನೆಯಲ್ಲಿ 8 ಮಂದಿ ಗಂಭೀರವಾಗಿ ಗಾಯಗೊಂಡಿದ್ದು, ಅವರಲ್ಲಿ ಕೆಲವರ ಸ್ಥಿತಿ ಚಿಂತಾಜನಕವಾಗಿದೆ. ಗಾಯಾಳುಗಳನ್ನು ರಿಮ್ಸ್ ಆಸ್ಪತ್ರೆಗೆ ಸೇರಿಸಲಾಗಿದೆ. ಸ್ಥಳಕ್ಕೆ ಮಾನ್ವಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Comments