UK Suddi
The news is by your side.

‘ಸೂಕ್ತ’ ನಿರ್ಧಾರಕ್ಕೆ ಹೈಕೋರ್ಟ್‌ ಆದೇಶ

​ಬೆಂಗಳೂರು: ಕೊಡಗು ಜಿಲ್ಲೆಯಲ್ಲಿ ಟಿಪ್ಪು ಜಯಂತಿ ಆಚರಣೆಗೆ ತಡೆ ನೀಡುವಂತೆ ಕೋರಿ ಸಲ್ಲಿಸಲಾಗಿದ್ದ ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್‌ ಈ ಬಗ್ಗೆ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಇದೇ 8ರೊಳಗೆ ಸೂಕ್ತ ನಿರ್ಧಾರ ಕೈಗೊಳ್ಳಬೇಕು ಎಂದು ಆದೇಶಿಸಿದೆ.

ಮುಖ್ಯ ನಾಯಮೂರ್ತಿ ಎಸ್‌.ಕೆ. ಮುಖರ್ಜಿ ನೇತೃತ್ವದ ವಿಭಾಗೀಯ ಪೀಠ ಗುರುವಾರ ಈ ಆದೇಶ ನೀಡಿದೆ.

ಟಿಪ್ಪು ಜಯಂತಿ ಆಚರಣೆ ವಿಚಾರ ಕೈಬಿಡುವಂತೆ ಅರ್ಜಿದಾರರು ಸರ್ಕಾರದ ಮುಖ್ಯ ಕಾರ್ಯದರ್ಶಿಯವರಿಗೆ ನ.4ರಂದು ಮನವಿ ಸಲ್ಲಿಸಬೇಕು. ಮುಖ್ಯ ಕಾರ್ಯದರ್ಶಿಯವರು ಈ ಮನವಿಯನ್ನು ಪರಿಗಣಿಸಿ ಇದೇ 8ರೊಳಗೆ ಸೂಕ್ತ ನಿರ್ಧಾರ ಪ್ರಕಟಿಸಬೇಕು ಎಂದು ವಿಭಾಗೀಯ ಪೀಠ ಆದೇಶಿಸಿದೆ.

ಇಷ್ಟಾದರೂ ಸರಕಾರ ಯಾವ ನಿರ್ಧಾರ ತಗೆದುಕೊಳ್ಳುತ್ತದೆ ಎಂದು ಕಾದು ನೋಡಬೇಕು
-ಪ್ರಸನ್ನ ಮ ಔರಸಂಗ

Comments