UK Suddi
The news is by your side.

ಬೀದರ್ : ಇಂಜಿನಿಯರಿಂಗ್ ವಿದ್ಯಾರ್ಥಿ ಆತ್ಮಹತ್ಯೆ

44003-man-on-a-chair-before-suicide-with-a-hanging-rope

ಕಿರುಕುಳದಿಂದ ಬೇಸತ್ತ ಇಂಜಿನಿಯರಿಂಗ್ ವಿದ್ಯಾರ್ಥಿ, ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.

ಬೀದರ್ : 19 ವರ್ಷದ ವಿದ್ಯಾರ್ಥಿ ಸಚಿನ್ ಕುಮಾರ್ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೀದರ್ ನಲ್ಲಿ ನಡೆದಿದೆ. ಬೀದರ್ ನ ಗುರುನಾನಕ್ ಇಂಜಿನಿಯರಿಂಗ್ ಕಾಲೇಜಿನಲ್ಲಿ ಸಿವಿಲ್ ಇಂಜಿನಿಯರಿಂಗ್ ವಿಭಾಗದಲ್ಲಿ ಓದುತ್ತಿದ್ದು, ವಿದ್ಯಾನಗರದಲ್ಲಿರುವ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ರ್ಯಾಗಿಂಗ್ ನಿಂದ ಸಚಿನ್ ಆತ್ಮಹತ್ಯೆ ಮಾಡಿಕೊಂಡಿರಬಹುದೆಂದು ಹೇಳಲಾಗಿದೆ. ಗಾಂಧಿಚೌಕ್ ಠಾಣೆಯ ಪೊಲೀಸರು ಸ್ಥಳ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

Comments