ಮಂಗಳವಾರ ಮಧ್ಯರಾತ್ರಿಯಿಂದ 500 ರೂ., 1000 ರೂ. ನೋಟುಗಳ ಚಲಾವಣೆ ರದ್ದು
ನವದೆಹಲಿ: ಕಪ್ಪು ಹಣ ಮತ್ತು ಭ್ರಷ್ಟಾಚಾರದ ವಿರುದ್ಧ ಸಮರ ಸಾರಿರುವ ಕೇಂದ್ರ ಸರ್ಕಾರ ಮಂಗಳವಾರ ಮಧ್ಯರಾತ್ರಿಯಿಂದಲೇ ಜಾರಿಗೆ ಬರುವಂತೆ 500 ರೂ. ಮತ್ತು 1000 ರೂ. ಮುಖಬೆಲೆಯ ನೋಟುಗಳ ಚಲಾವಣೆಯನ್ನು ರದ್ದುಗೊಳಿಸಿದೆ.
ಮಂಗಳವಾರ ರಾತ್ರಿ ರಾಷ್ಟ್ರವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ ಕಪ್ಪುಹಣ, ಭ್ರಷ್ಟಾಚಾರ ಮತ್ತು ನಕಲಿ ಹಣದ ವಿರುದ್ಧ ಕ್ರಮ ತೆಗೆದುಕೊಳ್ಳಲು ಕೇಂದ್ರ ಸರ್ಕಾರ ಈ ತೀರ್ಮಾನ ತೆಗೆದುಕೊಂಡಿದೆ ಎಂದು ತಿಳಿಸಿದರು.
500 ರೂ. ಮತ್ತು 1000 ರೂ. ಮುಖಬೆಲೆಯ ನೋಟುಗಳನ್ನು ಬ್ಯಾಂಕ್ ಮತ್ತು ಪೋಸ್ಟ್ ಆಫೀಸ್ಗಳಲ್ಲಿ ಬದಲಿಸಿಕೊಳ್ಳಲು ಡಿಸೆಂಬರ್ 31ರವರೆಗೆ ಅವಕಾಶ ನೀಡಲಾಗಿದೆ. ನವೆಂಬರ್ 9 ಮತ್ತು ನವೆಂಬರ್ 10 ರಂದು ಎಟಿಎಂಗಳು ಕಾರ್ಯ ನಿರ್ವಹಿಸುವುದಿಲ್ಲ.
ನವೆಂಬರ್ 11ರವರೆಗೆ ಆಸ್ಪತ್ರೆ, ಪೆಟ್ರೋಲ್ ಬಂಕ್, ರೈಲ್ವೆ ನಿಲ್ದಾಣ, ಏರ್ಪೋರ್ಟ್ ಮತ್ತು ಇತರ ತುರ್ತು ಸೇವೆಗಳನ್ನು ನೀಡುವ ಸ್ಥಳದಲ್ಲಿ ಮಾತ್ರ ಸ್ವೀಕರಿಸಲಾಗುತ್ತದೆ.