ಅಮೆರಿಕಾ ಅಧ್ಯಕ್ಷೀಯ ಚುನಾವಣೆ: ಟ್ರಂಪ್ ಗೆ ಗೆಲುವು
ವಾಷಿಂಗ್ಟನ್: ಅಮೆರಿಕಾ ಅಧ್ಯಕ್ಷೀಯ ಚುನಾವಣೆಗೆ ನಡೆದ ತೀವ್ರ ಪೈಪೋಟಿಯಲ್ಲಿ ಡೆಮಾಕ್ರಟಿಕ್ ಅಭ್ಯರ್ಥಿ ಹಿಲ್ಲರಿ ಕ್ಲಿಂಟನ್ ವಿರುದ್ದ ರಿಪಬ್ಲಿಕನ್ ಪಾರ್ಟಿ ಅಭ್ಯರ್ಥಿ ಟ್ರಂಪ್ ಜಯಭೇರಿ ಬಾರಿಸಿದ್ದಾರೆ.
538 ಸ್ಥಾನಗಳ ಪೈಕಿ ಡೋನಾಲ್ಡ್ ಟ್ರಂಪ್ 276ಕ್ಕೂ ಹೆಚ್ಚು ಸ್ಥಾನಗಳಲ್ಲಿ ಗೆಲುವು ಸಾಧಿಸಿದ್ದಾರೆ. ಹಿಲ್ಲರಿ 218 ಸ್ಥಾನಗಳಲ್ಲಿ ಜಯ ಸಾಧಿಸಿದ್ದಾರೆಂದು ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ.
ಅಮೆರಿಕಾದ ಒಟ್ಟು 51 ರಾಜ್ಯಗಳಲ್ಲಿ ಟ್ರಂಪ್ 27, ಹಿಲ್ಲರಿ 18 ರಾಜ್ಯಗಳಲ್ಲಿ ಗೆಲುವು ಸಾಧಿಸಿದ್ದಾರೆ. ಟ್ರಂಪ್ ಜಯ ಖಚಿತವಾಗುತ್ತಿದ್ದಂತೆ ಅವರ ಬೆಂಬಲಿಗರು ಸಂಭ್ರಮ ಆಚರಿಸುತ್ತಿದ್ದಾರೆ.
ಗೆಲುವಿನ ನಿರೀಕ್ಷೆಯಲ್ಲಿದ್ದ ಹಿಲ್ಲರಿ ಸೋಲು ಅನುಭವಿಸಿದ್ದು, ವಿಜೇತ ಅಭ್ಯರ್ಥಿ ಟ್ರಂಪ್ ಅವರನ್ನು ಅಭಿನಂದಿಸಿದ್ದಾರೆ.