LIVE ಕೆಎಲ್ಇ ಸಂಸ್ಥೆ ಶತಮಾನೋತ್ಸವ ಸಮಾರಂಭದಲ್ಲಿ ನರೇಂದ್ರ ಮೋದಿ
LIVE
ಬೆಳಗಾವಿ: ಪ್ರಧಾನ ಮಂತ್ರಿ ನರೇಂದ್ರ ಮೋದಿ ಭಾನುವಾರ ಬೆಳಗಾವಿಗೆ ಆಗಮಿಸಲಿದ್ದಾರೆ. ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಮಧ್ಯಾಹ್ನ ನಡೆಯುವ ಕೆಎಲ್ಇ ಸಂಸ್ಥೆ ಶತಮಾನೋತ್ಸವ ಸಮಾರಂಭದಲ್ಲಿ ಅವರು ಭಾಗವಹಿಸಲಿದ್ದಾರೆ.
ಪ್ರಧಾನ ಮಂತ್ರಿ ನಗರಕ್ಕೆ ಆಗಮಿಸುವ ಹಿನ್ನೆಲೆಯಲ್ಲಿ ನಗರದ ಎಲ್ಲೆಡೆ ಬಿಗಿ ಭದ್ರತೆ ಕಲ್ಪಿಸಲಾಗಿದ್ದು, ವಿಶೇಷ ಭದ್ರತಾದಳ(ಎಸ್ಪಿಜಿ), ಬಾಂಬ್ ನಿಷ್ಕ್ರಿಯ ದಳ, ಶ್ವಾನದಳ ಸೇರಿದಂತೆ ವಿವಿಧ ಭದ್ರತಾ ಇಲಾಖೆ ಅಧಿಕಾರಿಗಳು ಮೈದಾನದ ತಪಾಸಣೆ ನಡೆಸಿದ್ದಾರೆ.
ಸಾಂಬ್ರಾ ವಿಮಾನ ನಿಲ್ದಾಣ, ಜೆಎನ್ಎಂಸಿ ಮೈದಾನ, ಜಿಲ್ಲಾ ಕ್ರೀಡಾಂಗಣ, ಕೆಎಸ್ಆರ್ಪಿ ಪಿಟಿಸಿ ಮೈದಾನದಲ್ಲಿ ನಿರ್ಮಿಸಿರುವ ಹೆಲಿಪ್ಯಾಡ್ಗಳಲ್ಲಿ ಎಸ್ಪಿಜಿ ದಂಡು ಪರಿಶೀಲನೆ ನಡೆಸಿದೆ ಎಂದು ಮೂಲಗಳು ತಿಳಿಸಿವೆ. ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ, ಕೇಂದ್ರ ಸಚಿವರಾದ ಅನಂತಕುಮಾರ್, ಡಿ.ವಿ.ಸದಾನಂದಗೌಡ, ರಮೇಶ್ ಜಿಗಜಿಣಗಿ ಸೇರಿದಂತೆ ಹಲವರು ಪ್ರಧಾನಿ ಪಾಲ್ಗೊಳ್ಳುವ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.