ಬೈಲಹೊಂಗಲದಲ್ಲಿ ಪಿಎಫಐ ಮತ್ತು ಕೆಎಫಡಿ ಸಂಘಟನೆಗಳನ್ನು ನಿಷೇಧಿಸುವಂತೆ ಒತ್ತಾಯಿಸಿ ಪಂಜಿನ ಮೆರವಣಿಗೆ.
ಬೆಳಗಾವಿ:ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಕಾರ್ಯಕರ್ತ ಶರತ ಮಡಿವಾಳ ಹತ್ಯೆಯಲ್ಲಿ ನೇರವಾಗಿ ಭಾಗಿಯಾಗಿರುವ ಪಿಎಫಐ ಹಾಗೂ ಕೆಎಫಡಿ ಸಂಘಟನೆಗಳನ್ನು ನಿಷೇಧಿಸುವಂತೆ ಮತ್ತು ಸಚಿವ ರಮಾನಾಥ ರೈ ರಾಜೀನಾಮೆಗೆ ಒತ್ತಾಯಿಸಿ ಶಾಸಕ ಡಾ.ವಿಶ್ವನಾಥ ಪಾಟೀಲ ಅವರ ನೇತೃತ್ವದಲ್ಲಿ ಬಿಜೆಪಿ ಯುವ ಮೋರ್ಚಾ, ಮಂಡಲ ಬಿಜೆಪಿ ವತಿಯಿಂದ ಇಂದು ಸಂಜೆ ಬೈಲಹೊಂಗಲ ಪಟ್ಟಣದ ಎಪಿಎಂಸಿ ಗಣಪತಿ ದೇವಸ್ಥಾನದಿಂದ ವೀರಮಾತೆ ಕಿತ್ತೂರು ಚನ್ನಮ್ಮ ಸಮಾಧಿ ಸ್ಥಳದ ವರೆಗೆ ಪಂಜಿನ ಮೆರವಣಿಗೆ ನಡೆಸಲಾಯಿತು.
ಈ ಸಂದರ್ಭದಲ್ಲಿ ಬಿಜೆಪಿ ಯುವ ಮೋರ್ಚಾ ಸದಸ್ಯರು, ಮುಖಂಡರು, ಕಾರ್ಯಕರ್ತರು ಉಪಸ್ಥಿತರಿದ್ದರು.