UK Suddi
The news is by your side.

ಶುಕ್ರವಾರ 8 ಗಂಟೆಯಿಂದ ಶನಿವಾರ ಬೆಳಿಗ್ಗೆ  8 ಗಂಟೆವರೆಗೆ ಎಲ್ಲಾ ಖಾಸಗಿ ವೈದ್ಯರ ಸೇವೆ ಸ್ಥಗಿತ

unnamed

ಬೆಂಗಳೂರು: ಖಾಸಗಿ ಆಸ್ಪತ್ರೆಗಳಿಗೆ ನಿಯಂತ್ರಣ ಹೇರಲು ರಾಜ್ಯ ಸರ್ಕಾರ, ಕರ್ನಾಟಕ ಖಾಸಗಿ ಆಸ್ಪತ್ರೆಗಳ ವಿಧೇಯಕ ಜಾರಿಗೆ ತರಲು ಮುಂದಾಗಿದೆ. ಈ ವಿಧೇಯಕದಿಂದಾಗಿ ಖಾಸಗಿ ಆಸ್ಪತ್ರೆಯ ವೈದ್ಯರು ಹಾಗೂ ಸಿಬ್ಬಂದಿಗೆ ತೊಂದರೆ ಆಗಲಿದೆ. ಹೀಗಾಗಿ ಈ ವಿಧೇಯಕ ಖಂಡಿಸಿ ನಾಳೆ ರಾಜ್ಯಾದ್ಯಂತ ಮುಷ್ಕರ ಕೈಗೊಳ್ಳಲಾಗಿದೆ ಎಂದು ಇಂಡಿಯನ್ ಮೆಡಿಕಲ್ ಅಸೋಸಿಯೇಷನ್ ಅಧ್ಯಕ್ಷ ರವೀಂದ್ರ ತಿಳಿಸಿದ್ದಾರೆ.

ನಾಳೆ ಶುಕ್ರವಾರ (November 3) 8 ಗಂಟೆಯಿಂದ ಶನಿವಾರ ಬೆಳಿಗ್ಗೆ  8 ಗಂಟೆವರೆಗೆ ಎಲ್ಲಾ ವೈದ್ಯರು ಸೇವೆ ಸ್ಥಗಿತಗೊಳಿಸಿ ಸಾಂಕೇತಿಕ ಮುಷ್ಕರ ನಡೆಸಲು ತೀರ್ಮಾನಿಸಿದ್ದಾರೆ. ಇದರಿಂದ ಆಸ್ಪತ್ರೆಗೆ ಬರುವ ರೋಗಿಗಳಿಗೆ ತೊಂದರೆ ಆಗಲಿದೆ. ರೋಗಿಗಳಿಗೆ ಏನಾದ್ರೂ ತೊಂದರೆ ಆದರೆ ಸರ್ಕಾರವೇ ನೇರ ಹೊಣೆ ಎಂದು ಹೇಳಿದ್ದಾರೆ. ಇದನ್ನು ಗಂಭೀರವಾಗಿ ಪರಿಗಣಿಸಿರುವ ರಾಜ್ಯ ಸರ್ಕಾರ ಸರ್ಕಾರಿ ಆಸ್ಪತ್ರೆಗಳಲ್ಲಿನ ಎಲ್ಲಾ ಸಿಬ್ಬಂದಿಗಳ ರಜಾ ರದ್ದುಗೊಳಿಸುವಂತೆ ಜಿಲ್ಲಾ ಆರೋಗ್ಯ ಅಧಿಕಾರಿಗಳಿಗೆ ಸೂಚನೆ ನೀಡಿದೆ.

Comments