UK Suddi
The news is by your side.

ಸರ್ಕಾರ ಕರಾಳ ಆಸ್ಪತ್ರೆ ಮಸೂದೆಯನ್ನು ಕೈಬಿಟ್ಟು ವೈದ್ಯರೊಂದಿಗೆ ಸಮಾಲೋಚನೆ ನಡೆಸಿ ಸಮಸ್ಯೆಯನ್ನು ಪರಿಹರಿಸಬೇಕು:ಯಡಿಯೂರಪ್ಪ

ಪರಿವರ್ತನಾಯಾತ್ರೆಯ 3ನೇ ದಿನವಾದ ಇಂದು ಮಾಜಿ ಮುಖ್ಯಮಂತ್ರಿಗಳಾದ ಬಿ.ಎಸ್.ಯಡಿಯೂರಪ್ಪನವರು ತುಮಕೂರಿನಲ್ಲಿ ಸಭೆಗಳನ್ನು ನಡೆಸುತ್ತಿದ್ದಾರೆ. 

ಮೊದಲಿಗೆ ಸುದ್ಧಿಗೋಷ್ಠಿ ನಡೆಸಿ ಸರ್ಕಾರ ಕರಾಳ ಆಸ್ಪತ್ರೆ ಮಸೂದೆಯನ್ನು ಕೈಬಿಟ್ಟು ವೈದ್ಯರೊಂದಿಗೆ ಸಮಾಲೋಚನೆ ನಡೆಸಿ ಸಮಸ್ಯೆಯನ್ನು ಪರಿಹರಿಸಬೇಕೆಂದು ಆಗ್ರಹಿಸಿದರು. ನಂತರ ರೋಡ್ ಶೋ ನಡೆಸುವುದರೊಂದಿಗೆ ಸಾರ್ವಜನಿಕ ಸಮಾವೇಶಕ್ಕೆ ಆಗಮಿಸಿ ನೆರೆದಿದ್ದ ಸಹಸ್ರಾರು ಅಭಿಮಾನಿಗಳನ್ನುದ್ದೇಶಿಸಿ ಮಾತನಾಡಿದರು. 

ಜನರ ಸಮಸ್ಯೆಗಳಿಗೆ ಸ್ಪಂದಿಸದ ಕಾಂಗ್ರೆಸ್ ಸರ್ಕಾರದಿಂದಾಗಿ ರಾಜ್ಯದಲ್ಲಿ ಅರಾಜಕತೆ ಸೃಷ್ಟಿಯಾಗಿದೆ ಎಂದು ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು. 

ಮಾಜಿ ಮುಖ್ಯಮಂತ್ರಿಗಳಾದ ಜಗದೀಶ್ ಶೆಟ್ಟರ್, ಶ್ರೀರಾಮುಲು, ಶೋಭಾ ಕರಂದ್ಲಾಜೆ ಮತ್ತಿತರು ಜೊತೆಗೂಡಿದ್ದಾರೆ.

Comments