UK Suddi
The news is by your side.

ಜೆಡಿಎಸ್ ನ ಶಾಸಕರುಗಳು ಹಾಗು ಭ್ರಷ್ಟ ಕಾಂಗ್ರೆಸ್ ಸರ್ಕಾರ ಹಾಸನ ಜಿಲ್ಲೆಯ ಅಭಿವೃದ್ಧಿಯನ್ನು ಸಂಪೂರ್ಣವಾಗಿ ಕಡೆಗಣಿಸಿದೆ:ಬಿ ಎಸ್ ವೈ.

ಹಾಸನ:ಹಾಸನದಲ್ಲಿ ಬಿಜೆಪಿಯ ಪರಿವರ್ತನಾ ಯಾತ್ರೆ. 5ನೆಯ ದಿನವಾದ ಇಂದು ಮಾಜಿ ಮುಖ್ಯಮಂತ್ರಿಗಳಾದ ಬಿ.ಎಸ್.ಯಡಿಯೂರಪ್ಪನವರು ಹಾಸನದಲ್ಲಿ ಪತ್ರಿಕಾಗೋಷ್ಠಿ ನಡೆಸುವುದರೊಂದಿಗೆ ಯಾತ್ರೆಯನ್ನು ಆರಂಭಿಸಿದರು.

ನಂತರ ಬೃಹತ್ ಬಹಿರಂಗಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು ಜೆಡಿಎಸ್ ನ ಶಾಸಕರುಗಳು ಹಾಗು ಭ್ರಷ್ಟ ಕಾಂಗ್ರೆಸ್ ಸರ್ಕಾರ ಹಾಸನ ಜಿಲ್ಲೆಯ ಅಭಿವೃದ್ಧಿಯನ್ನು ಸಂಪೂರ್ಣವಾಗಿ ಕಡೆಗಣಿಸಿದೆ, ಬೊಕ್ಕಸವನ್ನು ಲೂಟಿ ಮಾಡಿ ಸಿದ್ದರಾಮಯ್ಯನವರು ರಾಜ್ಯವನ್ನು ಸಾಲಗಾರ ರಾಜ್ಯವಾಗಿ ಮಾಡಿದ್ದಾರೆ ಎಂದು ತೀವ್ರ ವಾಗ್ದಾಳಿ ನಡೆಸಿದರು. ಇದೇ ಸಂದರ್ಭದಲ್ಲಿ ಹಿರಿಯ ನಾಗರಿಕರುಗಳ ಅಹವಾಲುಗಳನ್ನು ಸ್ವೀಕರಿಸಿ ಅಧಿಕಾರಕ್ಕೆ ಬಂದರೆ ಅವರ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಒದಗಿಸುವುದಾಗಿ ಭರವಸೆ ನೀಡಿದರು. ಮುಖಂಡರುಗಳಾದ ಕೆ.ಎಸ್.ಈಶ್ವರಪ್ಪ, ಆರ್.ಅಶೋಕ್, ಶೋಭಾ ಕರಂದ್ಲಾಜೆ,  ವಿ. ಸೋಮಣ್ಣ, ಶ್ರೀರಾಮುಲು, ಸಿ.ಟಿ.ರವಿ ಮುಂತಾದವರು ಯಾತ್ರೆಯಲ್ಲಿ ಭಾಗವಹಿಸಿದ್ದಾರೆ.

Comments