UK Suddi
The news is by your side.

ಲ್ಯಾಪ್ ಟಾಪ್ ಖರೀದಿಯಲ್ಲಿ ಜನರಿಗೆ ಟೋಪಿ ಹಾಕಲಾಗಿದೆ:ಯಡಿಯೂರಪ್ಪ


ಶಿರಸಿ:ಪರಿವರ್ತನಾ ಯಾತ್ರೆಯ 11ನೆಯ ದಿನದ ಅಂತ್ಯದಲ್ಲಿ ಮಾಜಿ ಮುಖ್ಯ ಮಂತ್ರಿಗಳಾದ ಶ್ರೀ ಬಿ.ಎಸ್.ಯಡಿಯೂರಪ್ಪನವರು ಶಿರಸಿಯಲ್ಲಿ ಸಾರ್ವಜನಿಕ ಸಭೆ ನಡೆಸಿದರು. 

ಉತ್ತರ ಕನ್ನಡ ಜಿಲ್ಲೆಯಾದ್ಯಂತ ಬಿಜೆಪಿಯ ಯಾತ್ರೆಗೆ ಉತ್ತಮ ಸ್ಪಂದನೆ ದೊರಕಿದ್ದು ಇಲ್ಲಿಯೂ ಸಹ ಬೃಹತ್ ಸಂಖ್ಯೆಯಲ್ಲಿ ಸಾರ್ವಜನಿಕರು ಯಾತ್ರೆಗೆ ಬೆಂಬಲಿಸಿದರು. ಬಹಿರಂಗ ಸಭೆಯನ್ನುದ್ದೇಶಿಸಿ ಮಾತನಾಡಿದ ಸನ್ಮಾನ್ಯ ಯಡಿಯೂರಪ್ಪನವರು ಕಪ್ಪು ಚುಕ್ಕೆ ಇಲ್ಲದಂತೆ ಸರ್ಕಾರ ನಡೆಸುತ್ತಿದ್ದೇವೆಂಬ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಹೇಳಿಕೆಯನ್ನು ಖಂಡಿಸಿ ಲ್ಯಾಪ್ ಟಾಪ್ ಖರೀದಿಯಲ್ಲಿ ಜನರಿಗೆ ಟೋಪಿ ಹಾಕಲಾಗಿದೆ ಎಂದು ಆಪಾದನೆ ಮಾಡಿದರು. 

ಈ ಸಂದರ್ಭದಲ್ಲಿ ಮುಖಂಡರುಗಳಾದ ಅನಂತ್ ಕುಮಾರ್ ಹೆಗಡೆ, ಶೋಭಾ ಕರಂದ್ಲಾಜೆ, ಶ್ರೀರಾಮುಲು, ಕುಮಾರ್ ಬಂಗಾರಪ್ಪ ಮುಂತಾದವರು ಜೊತೆಯಲ್ಲಿದ್ದಾರೆ.

Comments