ಗಂಗಾವತಿ ವಿಧಾನಸಭಾ ಕ್ಷೇತ್ರ ಹಿರಕಲ್ ಗಡದಲ್ಲಿ ಮನೆ ಮನೆಗೆ ಕಾಂಗ್ರೆಸ್ ಅಭಿಯಾನ.
ಕೊಪ್ಪಳ:ಕಾಂಗ್ರೆಸ್ ಪಕ್ಷದ ಮನೆ ಮನೆಗೆ ಕಾಂಗ್ರೆಸ್ ಅಭಿಯಾನದ ಅಂಗವಾಗಿ ಇಂದು ಗಂಗಾವತಿ ವಿಧಾನಸಭಾ ಕ್ಷೇತ್ರದ ಹಿರಕಲನಲ್ಲಿ ಮನೆ ಮನೆಗೆ ಕಾಂಗ್ರೆಸ್ ಕಾರ್ಯಕ್ರಮವನ್ನು ನಡೆಸಲಾಯಿತು.
ಈ ಸಂದರ್ಭದಲ್ಲಿ ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಮತ್ತು ಕುಷ್ಟಗಿ ವಿಧಾನಸಭಾ ಕ್ಷೇತ್ರದ ವೀಕ್ಷಕರಾದ ಬಸವರಾಜಸ್ವಾಮಿ ಮಳೇಮಠ, ಗ್ರಾಮೀಣ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ರುದ್ರೇಶ ಡ್ಯಾಗಿ, ಮಾಜಿ ತಾಲ್ಲೂಕು ಪಂಚಾಯಿತಿ ಅಧ್ಯಕ್ಷರಾದ ಶರಣೇಗೌಡ ಮಾಲಿ ಪಾಟೀಲ್, ಮಾರುತಿ ತೋಟಗಂಟಿ, ಹನುಮಂತಪ್ಪ ಗೋಸಲ ದೊಡ್ಡಿ, ಗಂಗಾಧರ ಸ್ವಾಮಿ, ಸಣ್ಣಪ್ಪ ನಾಗರಾಜ, ಮತ್ತು ಅನೇಕ ಕಾಂಗ್ರೆಸ್ ಪಕ್ಷದ ಅಭಿಮಾನಿಗಳು ಕಾರ್ಯಕರ್ತರು ಉಪಸ್ಥಿತರಿದ್ದರು.