ನನ್ನ ಹೆಸರಿನಲ್ಲೇ ರಾಮ ಇದ್ದಾನೆ, ನಾವು ಯಾರಿಂದಲೂ ಪಾಠ ಕಲಿಯಬೇಕಾಗಿಲ್ಲ:ಸಿಎಂ ಸಿದ್ದರಾಮಯ್ಯ.
ಬೆಳಗಾವಿ: ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥರಿಂದ ಕರ್ನಾಟಕ ಯಾವುದೇ ಪಾಠ ಕಲಿಯಬೇಕಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದಾರೆ.
ಬೆಳಗಾವಿಯಲ್ಲಿ ಸರ್ಕಾರಿ ಅತಿಥಿ ಗೃಹದಲ್ಲಿ ರೈತ ಮುಖಂಡರ ಜೊತೆ ಸಮಾಲೋಚನೆ ನಡೆಸಿದ ನಂತರ ಮಾತನಾಡಿದ ಅವರು, ಉತ್ತರ ಪ್ರದೇಶ ಮತ್ತು ಬಿಹಾರದಲ್ಲಿ ಕಾನೂನು ವ್ಯವಸ್ಥೆ ತೀರಾ ಹದಗೆಟ್ಟಿದೆ. ಅವರು ಬಂದು ಇಲ್ಲಿನ ಕಾನೂನು ವ್ಯವಸ್ಥೆ ಬಗ್ಗೆ ನಮಗೆ ಪಾಠ ಮಾಡಬೇಕಿಲ್ಲ ಎಂದು ನುಡಿದಿದ್ದಾರೆ.
ಟಿಪ್ಪು ಜಯಂತಿ ಆಚರಣೆಗೆ ಯೋಗಿ ಆದಿತ್ಯನಾಥ್ ವಿರೋಧ ವ್ಯಕ್ತಪಡಿಸಿದ್ದನ್ನು ಸಿಎಂ ಈ ಸಂದರ್ಭದಲ್ಲಿ ಪ್ರಸ್ತಾಪಿಸಿದ್ದಾರೆ.ನನ್ನ ಹೆಸರಿನಲ್ಲೇ ರಾಮ ಇದ್ದಾನೆ. ನಾವು ರಾಮ, ಟಿಪ್ಪು, ಹನುಮಂತ, ಕನಕದಾಸ ಹೀಗೆ ಎಲ್ಲರ ಜಯಂತಿಯನ್ನೂ ಆಚರಿಸುತ್ತೇವೆ. ಹೀಗಾಗಿ ಕೋಮುವಾದದ ಜನಕರಾದ ಬಿಜೆಪಿಯವರಿಂದ ನಾವು ಕಲಿಯುವಂಥಾದ್ದು ಏನೂ ಇಲ್ಲ ಎಂದು ಹೇಳಿದ್ದಾರೆ.