ವಿಜಯ ರೂಪಾಣಿ ಗುಜರಾತ್ ಮುಖ್ಯ ಮಂತ್ರಿಯಾಗಿ ಅಧಿಕಾರ ಸ್ವೀಕಾರ
ಗಾಂಧಿನಗರ: ಗುಜರಾತ್ನ ಮುಖ್ಯಮಂತ್ರಿಯಾಗಿ ವಿಜಯ ರೂಪಾಣಿ ಸತತ ಎರಡನೇ ಬಾರಿಗೆ ಮಂಗಳವಾರ ಅಧಿಕಾರ ಸ್ವೀಕರಿಸಿದರು.
ರೂಪಾಣಿ (61) ಮುಖ್ಯ ಮಂತ್ರಿಯಾಗಿ ಹಾಗೂ ನಿತಿನ್ ಪಟೇಲ್ ಉಪ ಮುಖ್ಯ ಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದರು. ರಾಜ್ಯಪಾಲ ಓ. ಪಿ ಕೊಹ್ಲಿ ಇಲ್ಲಿ ಆಯೋಜಿಸಲಾಗಿದ್ದ ಅದ್ಧೂರಿ ಕಾರ್ಯಕ್ರಮದಲ್ಲಿ ಅಧಿಕಾರ ಮತ್ತು ಗೌಪ್ಯತೆ ಪ್ರಮಾಣವಚನ ಬೋಧಿಸಿದರು.
ಪ್ರಧಾನ ಮಂತ್ರಿ ನರೇಂದ್ರ ಮೋದಿ, ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಷಾ ಹಾಗೂ ಬಿಜೆಪಿ ಆಡಳಿತದಲ್ಲಿರುವ ರಾಜ್ಯದ ಮುಖ್ಯ ಮಂತ್ರಿಗಳು ಪ್ರಮಾಣ ವಚನ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.