UK Suddi
The news is by your side.

ಕಿತ್ತೂರು ರಾಣಿ ಚೆನ್ನಮ್ಮನ ಸಮಾಧಿಗೆ ತೆರಳಿ ಪೂಜೆ ಸಲ್ಲಿಸಿದ ಪ್ರಜ್ವಲ್ ರೇವಣ್ಣ.

ಬೈಲಹೊಂಗಲ:ಬೆಳಗಾವಿ ಜಿಲ್ಲೆಯ ಪ್ರವಾಸದಲ್ಲಿರುವ ರಾಜ್ಯ ಜೆ ಡಿ ಎಸ್ ಪ್ರಧಾನ ಕಾರ್ಯದರ್ಶಿ ಪ್ರಜ್ವಲ್ ರೇವಣ್ಣ ಅವರು ಜಿಲ್ಲೆಯ ಗಂಡು ಮೆಟ್ಟಿದ ನಾಡು ಬೈಲಹೊಂಗಲ ನಗರಕ್ಕೆ ಇಂದು ಮದ್ಯಾಹ್ನ ಬೇಟಿ ನೀಡಿದರು.

ನಂತರ ನಗರದ ವೀರವನಿತೆ ಕಿತ್ತೂರು ರಾಣಿ ಚೆನ್ನಮ್ಮನ ಸಮಾಧಿಗೆ ತೆರಳಿ ಪೂಜೆ ಸಲ್ಲಿಸಿ ಪುತ್ಥಳಿಗೆ ಮಾಲಾರ್ಪಣೆ ಮಾಡಿದರು.

ಇದರೊಂದಿಗೆ ಬೈಲಹೊಂಗಲ ವಿಧಾನಸಭಾ ಕ್ಷೇತ್ರದ ಜಾತ್ಯತೀತ ಜನತಾದಳದ ಪ್ರಚಾರಕ್ಕೆ ಮುನ್ನುಡಿ ಬರೆದರು.

ಈ ಸಂದರ್ಭದಲ್ಲಿ ಬೆಳಗಾವಿ ಜಿಲ್ಲೆಯ ಜೆ ಡಿ ಎಸ್ ಜಿಲ್ಲಾಧ್ಯಕ್ಷರಾದ ಶಂಕರ ಮಾಡಲಗಿ ಸೇರಿದಂತೆ ಪಕ್ಷದ ಮುಖಂಡರು,ಕಾರ್ಯಕರ್ತರು ಉಪಸ್ಥಿತರಿದ್ದರು.

Comments