UK Suddi
The news is by your side.

ಬಾಗಲಕೋಟೆಯಲ್ಲಿ ಕುರಿ ಮತ್ತು ಮೇಕೆ ಸಂತೆಯ ಉದ್ಘಾಟನಾ ಸಮಾರಂಭ.

ಬಾಗಲಕೋಟ:ನಗರದ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಪ್ರಾಂಗಣದಲ್ಲಿ ಕುರಿ ಮತ್ತು ಮೇಕೆ ಸಂತೆಯ ಉದ್ಘಾಟನಾ ಸಮಾರಂಭ ಜರುಗಿತು.

ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯ ಕುರಿ ಮತ್ತು ಮೇಕೆ ಸಂತೆಯ ಉದ್ಘಾಟನೆಯನ್ನು ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಎಸ್ ಆರ್ ಪಾಟೀಲ ನೆರವೇರಿಸಿದರು.

ನಂತರ ಮಾತನಾಡಿದ ಅವರು “ಕುರಿ ಮತ್ತು ಮೇಕೆ ಸಾಕಾಣಿಕೆಯಲ್ಲಿ ರೈತರು ಹೆಚ್ಚಿನ ಪ್ರಮಾಣದಲ್ಲಿ ಆಸಕ್ತಿ ವಹಿಸಿ ರೈತರು ಆರ್ಥಿಕ ವ್ಯವಸ್ಥೆಯಲ್ಲಿ ಮುನ್ನಡೆಯಲಿ” ಎಂದು ಹೇಳಿದರು.

ಸಮಾರಂಭದಲ್ಲಿ ಸ್ಥಳಿಯ ಶಾಸಕರಾದ ಎಚ್ ವೈ ಮೇಟಿ ಸೇರಿದಂತೆ ಅನೇಕ ಮುಖಂಡರು, ರೈತರು, ಅಧಿಕಾರಿಗಳು ಉಪಸ್ಥಿತರಿದ್ದರು.

Comments