ಸಚಿವ ಹೆಗಡೆಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ.
ಬೆಳಗಾವಿ : ನಗರಕ್ಕೆ ಬಂದಿದ್ದ ಕೇಂದ್ರ ಕೌಶಲ್ಯಾಭಿವೃದ್ದೀ ಸಚಿವ ಅನಂತಕುಮಾರ್ ಹೆಗಡೆಗೆ ವಿವಿಧ ದಲಿತ ಸಂಘಟನೆಗಳ ನಾಯಕರು ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ ತೋರಿಸಿದ್ದಾರೆ.
ನಗರದ ಚನ್ನಮ್ಮ ವೃತ್ತದಲ್ಲಿರುವ ಕನ್ನಡ ಸಾಹಿತ್ಯ ಭವನದಲ್ಲಿ ಕೇಂದ್ರ ಸಚಿವ ಅನಂತಕುಮಾರ ಹೆಗಡೆಯವರ ಪೂರ್ವ ನಿಯೋಜಿತ ಕಾರ್ಯಕ್ರಮ ನಿಗದಿಯಾಗಿತ್ತು. ಅನಂತಕುಮಾರ್ ಹೆಗಡೆ ಅವರು ಚನ್ನಮ್ಮ ವೃತ್ತಕ್ಕೆ ಆಗಮಿಸುತ್ತಿದ್ದಂತೆಯೇ ರಸ್ತೆಗೀಳಿದ ವಿವಿಧ ದಲಿತ ಪರ ಸಂಘಟನೆಗಳ ನಾಯಕರು ಸಚಿವರ ವಿರುದ್ಧ ಧಿಕ್ಕಾರದ ಘೋಷಣೆಗಳನ್ನು ಕೂಗಿ, ಕಪ್ಪು ಬಾವುಟ ಪ್ರದರ್ಶಿಸಿ ಆಕ್ರೋಶ ವ್ಯಕ್ತ ಪಡಿಸಿದರು.