ಏ.15ರಂದು ಬಿಜೆಪಿಯ ಇನ್ನುಳಿದ 152 ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಸಾದ್ಯತೆ
ಹುಬ್ಬಳ್ಳಿ: ಬಿಜೆಪಿ ಚುನಾವಣಾ ಅಭ್ಯರ್ಥಿಗಳ ಎರಡನೇ ಪಟ್ಟಿ ಕುರಿತು ರಾಷ್ಟ್ರೀಯ ಅಮಿತ್ ಶಾ ಅವರ ಜತೆ ಗುರುವಾರ ತಡ ರಾತ್ರಿಯವರೆಗೂ ಚರ್ಚೆ ನಡೆಸಿದ್ದು, ಏ. 15ರಂದು ದೆಹಲಿಯಲ್ಲಿ ಮತ್ತೊಮ್ಮೆ ಸಭೆ ಸೇರಿ ಅಭ್ಯರ್ಥಿಗಳ ಪಟ್ಟಿ ಅಂತಿಮಗೊಳಿಸಲಾಗುವುದು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಹೇಳಿದರು.
ಈಗಾಗಲೇ ಮೊದಲ ಹಂತದಲ್ಲಿ ಬಿಜೆಪಿಯ 72 ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಲಾಗಿದೆ. ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ನೇತೃತ್ವದಲ್ಲಿ ಇನ್ನುಳಿದ 152 ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆ ನಡೆದಿದ್ದು, ಗೆಲ್ಲುವಂತಹ ಹಾಗೂ ಪಕ್ಷಕ್ಕೆ ಬದ್ಧರಾಗಿರುವ ಅಭ್ಯರ್ಥಿಗಳಿಗೆ ಪ್ರಾಶಸ್ತ್ಯ ನೀಡುವ ಕುರಿತು ಒಮ್ಮತದ ತೀರ್ಮಾನಕ್ಕೆ ಬಂದು ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗಿದೆ ಎಂದರು.