UK Suddi
The news is by your side.

ಕೊಡಗು ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ಅನೀಸ್ ಕಣ್ಮಣಿ ಜಾಯ್.

ಕೊಡಗು:ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ಅನೀಸ್ ಕಣ್ಮಣಿ ಜಾಯ್ ಅವರು ನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಶುಕ್ರವಾರ ಅಧಿಕಾರ ಸ್ವೀಕರಿಸಿದರು.

ಪ್ರಭಾರ ಜಿಲ್ಲಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಜಿ.ಪಂ.ಸಿಇಒ ಕೆ.ಲಕ್ಷ್ಮಿಪ್ರಿಯಾ ಅವರು ನೂತನ ಜಿಲ್ಲಾಧಿಕಾರಿ ಅವರಿಗೆ ಅಧಿಕಾರ ಹಸ್ತಾಂತರಿಸಿದರು.

ಅನೀಸ್ ಕಣ್ಮಣಿ ಜಾಯ್ ಅವರು ಈ ಹಿಂದೆ ತುಮಕೂರು ಜಿಲ್ಲೆಯಲ್ಲಿ ಜಿ.ಪಂ.ಸಿಇಒ, ನವದೆಹಲಿಯ ಕರ್ನಾಟಕ ಭವನದಲ್ಲಿ ಉಪ ಆಯುಕ್ತರಾಗಿ,ಬೀದರ್ ಜಿಲ್ಲೆಯ ಉಪ ವಿಭಾಗಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸಿದ್ದರು.

Comments