UK Suddi
The news is by your side.

ಬಜೆಟ್:ರೈತರಿಗೆ ಭರ್ಜರಿ ಗಿಫ್ಟ್ ನೀಡಿದ ಮೋದಿ ಸರ್ಕಾರ.

ನವದೆಹಲಿ:ಲೋಕಾ ಚುನಾವಣೆಗೆ ಕೆಲವೇ ತಿಂಗಳು ಬಾಕಿ ಇರುವಾಗಲೇ,ಇಂದು ಮೋದಿ ಸರ್ಕಾರದಿಂದ ಮಧ್ಯಂತರ ಬಜೆಟ್ ಮಂಡನೆಯಾಗುತ್ತಿದ್ದು.
ಎನ್‌ಡಿಎ ಸರ್ಕಾರದ ಮಧ್ಯಂತರ ಬಜೆಟ್ ನ್ನು ಹಂಗಾಮಿ ವಿತ್ತ ಸಚಿವ ಪಿಯೂಷ್ ಗೋಯೆಲ್ ಮಂಡಿಸುತ್ತಿದ್ದಾರೆ.
ಬಜೆಟ್ನಲ್ಲಿ ರೈತರಿಗೆ ಬಂಪರ್ ಕೊಡುಗೆ ನೀಡಲಾಗಿದೆ.

ಮಧ್ಯಂತರ ಬಜೆಟ್ನಲ್ಲಿ ಹೊಸ ಯೋಜನೆ ಘೋಷಿಸಿರುವ ಕೇಂದ್ರ ಸರ್ಕಾರ ಸಣ್ಣ ಮತ್ತು ಮಧ್ಯಮ ರೈತರ ಖಾತೆಗಳಿಗೆ ವಾರ್ಷಿಕ 6 ಸಾವಿರ ರೂಪಾಯಿ ಜಮಾ ಮಾಡಲಿದೆ.

ಬಜೆಟ್ನಲ್ಲಿ ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ಯೋಜನೆ ಘೋಷಿಸಿದ ಕೇಂದ್ರ ಪಿಯೂಷ್ ಗೊಯಲ್ ಈ ಯೋಜನೆ ಮೂಲಕ ಸಣ್ಣ 5ಎಕರೆ ಒಳಗಡೆ ಭೂಮಿ ಇರೋ ಸಣ್ಣಹಿಡುವಳಿ ರೈತರ ಖಾತೆಗೆ ಸುಮಾರು 6 ಸಾವಿರ ರೂಪಾಯಿ ಹಾಕಲಾಗುವುದು ಎಂದು ಬಜೆಟ್ನಲ್ಲಿ ಘೋಷಿಸಿದ್ದಾರೆ.

ಡಿಸೆಂಬರ್ 2018 ರಿಂದ ಈ ಯೋಜನೆ ಜಾರಿಗೊಳಿಸಲಾಗಿದ್ದು,ವರ್ಷದಲ್ಲಿ ಮೂರು ಕಂತುಗಳಲ್ಲಿ ರೈತರಿಗೆ ಹಣ ನೀಡಲಾಗುವುದು,ಈ ಯೋಜನೆಯಿಂದ 12 ಕೋಟಿ ರೈತರಿಗೆ ಸಹಾಯವಾಗಲಿದೆ ಎಂದು ಹೇಳಿದರು.

Comments