UK Suddi
The news is by your side.

ಬೆಂಗಳೂರಿನಲ್ಲಿ ನೆಲಕ್ಕುರಳಿದ ಯುದ್ದ ವಿಮಾನ: ಇಬ್ಬರು ಪೈಲಟ್ ಗಳ ಸಾವು!

ಬೆಂಗಳೂರು: ಹೆಚ್ಎಎಲ್ ವಿಮಾನದಲ್ಲಿ ಯುದ್ದ ವಿಮಾನವೊಂದು ಪತನಗೊಂಡಿದ್ದು, ಇಬ್ಬರು ಪೈಲಟ್ ಗಳು ದುರ್ಮರಕ್ಕೀಡಾಗಿದ್ದಾರೆ ಎಂದು ತಿಳಿದು ಬಂದಿದೆ.

ಮೀರಜ್-2000 ಎಂಬ ಹೆಸರಿನ ವಿಮಾನ ಟೇಕ್ ಆಫ್ ಆಗುವ ವೇಳೆ ತಾಂತ್ರಿಕ ದೋಷದಿಂದ ಅಪಘಾತಕ್ಕೀಡಾಗಿದೆ. ಸ್ಕ್ವಾಡ್ರನ್ ಲೀಡರ್ ಸಿದ್ದಾರ್ಥ ನೇಗಿ ಸ್ಥಳದಲ್ಲೇ ಮೃತಪಟ್ಟರೇ ಗಂಭೀರವಾಗಿ ಗಾಯಗೊಂಡಿದ್ದ ಸ್ಕ್ವಾಡ್ರನ್ ಲೀಡರ್ ಸಮೀರ್ ಅಬ್ರೊಲ್ ಸೇನಾ ಆಸ್ಪತ್ರೆಯಲ್ಲಿ ಅಸುನೀಗಿದ್ದಾರೆ.

ಇನ್ನೊಬ್ಬ ಗಾಯಾಳು ಸ್ಥಿತಿ ಚಿಂತಾಜನಕವಾಗಿದ್ದು, ಸೇನಾ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ವಿಮಾನದಲ್ಲಿ ದೋಷ ಕಾಣಿಸಿಕೊಳ್ಳುತ್ತಿದ್ದಂತೆ ಮೂರವರು ಪೈಲಟ್ ಗಳು ಹಾರಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಘಟನಾ ಸ್ಥಳದಲ್ಲಿ ಶೋಧ ಕಾರ್ಯ ಮುಂದುವರೆದಿದೆ ಎಂದು ವೈಟ್ ಫೀಲ್ಡ್ ವಿಭಾಗದ ಡಿಸಿಪಿ ಅಬ್ದುಲ್ ಅಹದ್ ಸ್ಪಷ್ಟನೆ ನೀಡಿದ್ದಾರೆ.

ದುರ್ಘಟನೆಯ ಮಾಹಿತಿ ಲಭ್ಯವಾಗುತ್ತಿದ್ದಂತೆ ಹೆಚ್ಎಎಲ್ ಹಿರಿಯ ಅಧಿಕಾರಿಗಳು ಸ್ಥಳಕ್ಕೆ ದೌಡಾಯಿಸಿ ಪರಿಶೀಲನೆ ನಡೆಸಿದ್ದಾರೆ.

Comments