UK Suddi
The news is by your side.

ರಾಜಕೀಯ ಕ್ಷೇತ್ರಕ್ಕೆ ಮಾತ್ರ ಸೀಮಿತವಲ್ಲದೆ ಧಾರ್ಮಿಕ ಕ್ಷೇತ್ರಕ್ಕೂ ಸೀಮಿತವಾಗಿರುವ ಶಾಸಕಿ ಲಕ್ಷ್ಮೀ ಹೆಬ್ಬಾಳಕರ.

ಮೈಸೂರು: ಕರ್ನಾಟಕ ರಾಜ್ಯ ಖನಿಜ ನಿಗಮದ ಅಧ್ಯಕ್ಷೆ, ಬೆಳಗಾವಿ ಗ್ರಾಮೀಣ ಶಾಸಕಿ ಲಕ್ಷ್ಮೀ ಹೆಬ್ಬಾಳಕರ ಅವರು ರಾಜಕೀಯ ಕ್ಷೇತ್ರಕ್ಕೆ ಮಾತ್ರ ಸೀಮಿತವಾಗಿದೆ ಹಲವಾರು ಧಾರ್ಮಿಕ ಕಾರ್ಯಕ್ರಮಗಳಲ್ಲಿ ತಮ್ಮನ್ನು ತಾವು ತೋಡಗಿಸಿಕೊಂಡಿದ್ದಾರೆ.

ನಿನ್ನೆ ಜಿಲ್ಲೆಯ ಕಪಿಲಾ ನದಿ ತೀರದಲ್ಲಿರುವ ಶ್ರೀ ಕ್ಷೇತ್ರ ಸುತ್ತೂರು, ಶ್ರೀಮತ್ಸುತ್ತೂರು ಜಗದ್ಗುರು ಶ್ರೀ ವೀರಸಿಂಹಾಸನ ಮಹಾಸಂಸ್ಥಾನ ಮಠಕ್ಕೆ ಆಗಮಿಸಿದ ಅವರು ಶ್ರೀ ಕ್ಷೇತ್ರದಲ್ಲಿ ವಿಜ್ರಭಂಣೆಯಿಂದ ಆರಂಭವಾಗಿರು ಆದಿಜಗದ್ಗುರು ಶ್ರೀ ಶಿವರಾತ್ರೀಶ್ವರ ಶಿವಯೋಗಿಗಳವರ ಜಾತ್ರಾ ಮಹೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿದ ಅವರು ಕರ್ತೃ ಗದ್ದುಗೆಯ ದರ್ಶನ ಪಡೆದು ಶ್ರೀಗಳಿಂದ ಆಶೀರ್ವಾದ ಪಡೆದರು.

ಇದಕ್ಕೂ ಮೊದಲು ಜಾತ್ರಾ ಮಹೋತ್ಸವಕ್ಕೆ ಸಾಂಪ್ರದಾಯಿಕವಾಗಿ ಚಾಲನೆ ದೊರೆಯಿತು. ಹಳೆ ಮೈಸೂರು ಪ್ರಾಂತ್ಯದಲ್ಲಿ ‘ಸುತ್ತೂರು ಜಾತ್ರೆ’ ಎಂದೇ ಖ್ಯಾತಿ ಪಡೆದಿರುವ ಈ ಜಾತ್ರಾ ಮಹೋತ್ಸವ ಪ್ರತಿ ವರ್ಷದಂತೆ ಪುಷ್ಯ ಬಹುಳ ದ್ವಾದಶಿಯಂದು ಕರ್ತೃ ಗದ್ದುಗೆಗೆ ಪ್ರಾತಃಕಾಲ 4 ಕ್ಕೆ ಅನುಜ್ಞೆ, ಮಹಾಸಂಕಲ್ಪ ಪೂರ್ವಕ ಮಹಾರುದ್ರಾಭಿಷೇಕ ಸಲ್ಲಿಸುವ ಮೂಲಕ ಜಾತ್ರೆಯು ವಿಧ್ಯುಕ್ತವಾಗಿ ಆರಂಭಗೊಂಡಿತು.

ಶ್ರೀಮಠದ ಆವರಣದಲ್ಲಿ ಹಾಕಲಾಗಿದ್ದ ಸಭಾವೇದಿಕೆಯಲ್ಲಿ ವಸ್ತು ಪ್ರದರ್ಶನ, ಕೃಷಿ ಮೇಳ ಮತ್ತು ಸಾಂಸ್ಕೃತಿಕ ಮೇಳಕ್ಕೆ ಆದಿಚುಂಚನಗಿರಿ ಕ್ಷೇತ್ರದ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ ಅವರು ಚಮಾಳ ವಾದ್ಯವನ್ನು ಬಾರಿಸುವ ಮೂಲಕ ಉದ್ಘಾಟಿಸಿದರು. ಶ್ರೀ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ಸಾನ್ನಿಧ್ಯದಲ್ಲಿ ನಡೆದ ಈ ಕಾರ್ಯಕ್ರಮಕ್ಕೆ ರಾಜ್ಯದ ನಾನಾ ಭಾಗಗಳಿಂದ ಬಂದಿದ್ದ ಸಾವಿರಾರು ಸಂಖ್ಯೆಯ ಭಕ್ತರು ಸಾಕ್ಷಿಯಾದರು.

Comments