UK Suddi
The news is by your side.

ಲಾರಿ ಚಕ್ರಕ್ಕೆ ಸಿಲುಕಿ ಐದು ವರ್ಷದ ಬಾಲಕ ಸ್ಥಳದಲ್ಲೆ ಸಾವು

ಕಲಬುರಗಿ: ಲಾರಿ ಹಿಂಬದಿ ಚಕ್ರಕ್ಕೆ ಸಿಲುಕಿ ಐದು ವರ್ಷದ ಬಾಲಕನೊಬ್ಬ ಸ್ಥಳದಲ್ಲಿಯೇ ಮೃತಪಟ್ಟ ದಾರುಣ ಘಟನೆ ನಗರದ ಸೇಡಂ ರಸ್ತೆಯ ಬಿಲಗುಂದಿ ವೃತ್ತದ ಖರ್ಗೆ ಪೆಟ್ರೋಲ್ ಬಂಕ್ ಬಳಿ ನಡೆದಿದೆ.

ಕಮಲಾಪುರದ ವಿರಾಟ್ ಪವಾರ್ ಮೃತಪಟ್ಟ ಬಾಲಕ. ತಾಯಿಯ ಜೊತೆಗೆ ನಡೆದುಕೊಂಡು ಹೋಗುತ್ತಿದ್ದಾಗ ಲಾರಿ ಹಿಂಬದಿಯ ಚಕ್ರಕ್ಕೆ ಸಿಲುಕಿ ಬಾಲಕ ಸ್ಥಳದಲ್ಲಿಯೇ ಮೃತಪಟ್ಟಿದ್ದಾನೆ.

ಘಟನೆ ಬಳಿಕ ಲಾರಿ ಚಾಲಕ ಲಾರಿಯನ್ನು ಸ್ಥಳದಲ್ಲಿಯೇ ಬಿಟ್ಟು ಪರಾರಿಯಾಗಿದ್ದು, ಎಂ.ಬಿ.ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ತನಿಖೆ ನಡೆದಿದೆ.

Comments