UK Suddi
The news is by your side.

ವಿಜಯಪುರ: ಪ್ರಧಾನಮಂತ್ರಿ ಆವಾಸ ಯೋಜನೆಯಡಿ 1800 ಮನೆಗಳ ನಿರ್ಮಾಣ: ಶಾಸಕ ಯತ್ನಾಳ

ವಿಜಯಪುರ: ನಗರದಲ್ಲಿ ವಸತಿ ಇಲಾಖೆಯ ಕರ್ನಾಟಕ ಕೊಳಗೇರಿ ಅಭಿವೃದ್ಧಿ ಮಂಡಳಿ ವತಿಯಿಂದ ಪ್ರಧಾನ ಮಂತ್ರಿ ಆವಾಸ ಯೋಜನೆಯಡಿ ವಿವಿಧ ಕೊಳಗೇರಿ ಪ್ರದೇಶಗಳಲ್ಲಿ ಮಂಜೂರಾದ 1800 ಮನೆಗಳ ನಿರ್ಮಾಣ ಕಾಮಗಾರಿಗೆ ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಭೂಮಿ ಪೂಜೆ ಸಲ್ಲಿಸಿ ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ಶ್ರೀ ಸಿದ್ದೇಶ್ವರ ಸಹಕಾರಿ ಬ್ಯಾಂಕ್ ನಿರ್ದೇಶಕ ಗುರು ಗಚ್ಚಿನಮಠ, ಮಹಾನಗರ ಪಾಲಿಕೆ ಸದಸ್ಯ ಎಮ್.ಎಸ್.ಕರಡಿ, ರಾಹುಲ ಜಾಧವ, ಬಿಜೆಪಿ ನಗರ ಘಟಕ ಅಧ್ಯಕ್ಷ ಶಿವರುದ್ರ ಬಾಗಲಕೋಟ, ಅಶೋಕ್ ಬೆಲ್ಲದ,
ರಾಘವ ಅಣ್ಣಿಗೇರಿ, ಸೇರಿದಂತೆ ಬಡಾವಣೆಯ ಹಿರಿಯರು ಯುವಕರು ಉಪಸ್ಥಿತರಿದ್ದರು

Comments