UK Suddi
The news is by your side.

ರಾಜ್ಯದಲ್ಲಿ ಮತ್ತೆ ಆಪರೇಷನ್ ಸಂಕಷ್ಟ..!!

ಬೆಂಗಳೂರು: ರಾಜ್ಯದಲ್ಲಿ ಆಪರೇಷನ್ ಮತ್ತೆ ರಾಜಕೀಯ ಕ್ಷಿಪ್ರಕ್ರಾಂತಿಯ ವದಂತಿ ಹರಡಿದೆ. ಫೆಬ್ರವರಿ 6 ರಿಂದ ಬಜೆಟ್ ಅಧಿವೇಶನ ಆರಂಭವಾಗಲಿದ್ದು, ಮತ್ತೆ ಆಪರೇಷನ್ ಕಮಲಕ್ಕೆ ಬಿಜೆಪಿ ಕೈ ಹಾಕಿದೆ ಎನ್ನಲಾಗಿದೆ. ಈ ಬೆನ್ನಲ್ಲೇ ಮಾಜಿ ಸಚಿವ ಆರ್. ಅಶೋಕ ಹೊಸ ಬಾಂಬ್ ಸಿಡಿಸಿದ್ದಾರೆ.

ಕಾಂಗ್ರೆಸ್ಸಿನ 20 ರಿಂದ 25 ಶಾಸಕರು ಹಾಗೂ ಜೆಡಿಎಸ್‍ನ ಕೆಲವು ಶಾಸಕರು ಕೈಗೆ ಸಿಗದೇ ಓಡಾಡುತ್ತಿದ್ದು, ಮುಖ್ಯಮಂತ್ರಿ ಕುಮಾರಸ್ವಾಮಿ ಬಜೆಟ್ ಮಂಡಿಸೋದೇ ಅನುಮಾನ. ನಾವೇನೂ ರಾಜಕೀಯ ಸನ್ಯಾಸಿಗಳಲ್ಲ. ಮೈತ್ರಿ ಪಕ್ಷದ ಶಾಸಕರು ರಾಜೀನಾಮೆ ಕೊಟ್ಟರೆ ನಾವು ಒಂದು ಕೈ ನೋಡ್ತೀವಿ ಅಂತ ಆರ್. ಅಶೋಕ್ ಹೇಳಿದ್ದಾರೆ. ಕಾಂಗ್ರೆಸ್ ಪಕ್ಷದಲ್ಲಿನ ಅಸಮಾಧಾನವನ್ನು ಸಚಿವ ಸತೀಶ್ ಜಾರಕಿಹೊಳಿ ಒಪ್ಪಿಕೊಂಡಿದ್ದು, ರೆಸಾರ್ಟ್ ರಾಜಕಾರಣಕ್ಕೆ ಬಿಜೆಪಿ ನಿರಂತರವಾಗಿ ಯತ್ನಿಸುತ್ತಿದೆ ಅಂತ ದೂರಿದ್ದಾರೆ.

Comments