UK Suddi
The news is by your side.

ಕಾಂಗ್ರೆಸ್ ಶಾಸಕರಿಗೆ ಭರ್ಜರಿ ಆಫರ್: ತಲಾ 200 ಕೋಟಿ.

ಬೆಂಗಳೂರು: ಕಾಂಗ್ರೆಸ್ ಶಾಸಕರಿಗೆ ಆಪರೇಶನ್ ಕಮಲದ ಹೆಸರಿನಲ್ಲಿ 200-300 ಕೋಟಿ ರೂಪಾಯಿ ಆಮಿಷವೊಡ್ಡುತ್ತಿರುವುದು ತಿಳಿದುಬಂದಿದೆ ಎಂದು ರಾಜ್ಯ ಕಾಂಗ್ರೆಸ್ ಉಸ್ತುವಾರಿ ಕೆ.ಸಿ. ವೇಣುಗೋಪಾಲ್ ಹಾಗೂ ಕೆಪಿಸಿಸಿ ಅಧ್ಯಕ್ಷ ದಿನೇಶ ಗುಂಡುರಾವ್ ಹೇಳಿದ್ದಾರೆ.

ಅವರು ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಅಧಿಕಾರ ಇಲ್ಲದೆ ಬಿಜೆಪಿ ಸಂಪೂರ್ಣವಾಗಿ ಹತಾಸೆಗೊಂಡಿದೆ ಒಬ್ಬೊಬ್ಬ ಶಾಸಕರಿಗೆ 200 ಕೋಟಿ ಅಂದ್ರೆ ಹತ್ತು ಶಾಸಕರಿಗೆ 2 ಸಾವಿರ ಕೋಟಿ ರೂಪಾಯಿ ಆಗುತ್ತದೆ. ಅದು ಹೋಮ್ ಡೆಲಿವರಿ ಮಾಡುವ ಭರವಸೆ ನೀಡುತ್ತಿದ್ದಾರೆ. ಇಷ್ಟೊಂದು ದುಡ್ಡು ಎಲ್ಲಿಂದ ಬರುತ್ತಿದೆ ಎಂದು ಪ್ರಶ್ನೆ ಮಾಡಿದ್ದಾರೆ.

ಪ್ರಧಾನಿ ಮೋದಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅವರು ದೊಡ್ಡ ದೊಡ್ಡ ಮಾತುಗಳನ್ನು ಆಡುತ್ತಿದ್ದಾರೆ. ಆದರೆ ಇಲ್ಲಿ ಅವರದೆ ಪಕ್ಷದ ನಾಯಕರು ಹಣದ ಹೊಳೆಯನ್ನೇ ಹರಿಸುತ್ತಿದ್ದಾರೆ ಎಂದು ಗುಡುಗಿದರು.

ಈ ಬಗ್ಗೆ ಬಿಜೆಪಿ ನಾಯಕರು ಮಾಧ್ಯಮದ ಮುಂದೆ ಬಂದು ಹೇಳಲಿ ಎಂದು ಬಹಿರಂಗ ಸವಾಲ್ ಹಾಕಿದ ರಾಜ್ಯ ಕಾಂಗ್ರೆಸ್ ಉಸ್ತುವಾರಿ ಕೆ.ಸಿ. ವೇಣುಗೋಪಾಲ್, ನಮ್ಮ ಶಾಸಕರ ಮೇಲೆ ನಮಗೆ ಸಂಪೂರ್ಣ ವಿಶ್ವಾಸವಿದೆ. ಅವರು ಯಾವುದೇ ಕಾರಣಕ್ಕೂ ಪಕ್ಷ ಬಿಟ್ಟು ಹೋಗುವುದಿಲ್ಲ. ಸರಕಾರ ಐದು ವರ್ಷ ಅವಧಿ ಪೂರೈಸಲಿದೆ ಎಂದು ಹೇಳಿದರು.

Comments