UK Suddi
The news is by your side.

ಫೆಬ್ರುವರಿ 10 ಕ್ಕೆ ಹುಬ್ಬಳ್ಳಿಯಲ್ಲಿ ಪ್ರಧಾನಿ ಮೋದಿ ಬೃಹತ್ ಸಮಾವೇಶ.

ಹುಬ್ಬಳ್ಳಿ: ಲೋಕಸಭೆ ಚುನಾವಣಾ ಪ್ರಚಾರಕ್ಕೆ ಪ್ರಧಾನಿ ನರೇಂದ್ರ ಮೋದಿ ಗಂಡು ಮೆಟ್ಟಿದ ನಾಡು ಹುಬ್ಬಳ್ಳಿಯಲ್ಲಿ ಚಾಲನೆ ನೀಡಲಿದ್ದಾರೆ. ಈ ಹಿನ್ನಲೆಯಲ್ಲಿ ಫೆ. 10ರಂದು ಗಬ್ಬೂರ ಕ್ರಾಸ್ ಬಳಿಯ ಕೆ ಎಲ್ ಇ ಮೆಡಿಕಲ್ ಕಾಲೇಜ್ ಆವರಣದಲ್ಲಿ ಬೃಹತ್ ಸಮಾವೇಶ ಆಯೋಜಿಸಲಾಗಿದೆ ಎಂದು ಮಾಜಿ ಡಿಸಿಎಂ ಆರ್. ಅಶೋಕ ಹೇಳಿದರು.

ಅವರು ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಧಾರವಾಡ, ಹಾವೇರಿ, ಉತ್ತರ ಕನ್ನಡ ಲೋಕಸಭಾ ಕ್ಷೇತ್ರದ ಕಾರ್ಯಕರ್ತರು ಈ ಸಮಾವೇಶದಲ್ಲಿ ಭಾಗವಹಿಸಲಿದ್ದಾರೆ ಎಂದರು.

ಸಮಾವೇಶದಲ್ಲಿ ಬಿಜೆಪಿಯ ಎಲ್ಲ ಶಾಸಕರು, ಸಂಸದರು ಉಪಸ್ಥಿತರಿರುತ್ತಾರೆ. ಮೋದಿಯವರು ಕರ್ನಾಟಕದಲ್ಲಿ ಒಟ್ಟು ಒಂಭತ್ತರಿಂದ ಹತ್ತು‌ ಸಮಾವೇಶ ಮಾಡಲಿದ್ದಾರೆ. ಹುಬ್ಬಳ್ಳಿ ಸಮಾವೇಶದ ಉಸ್ತುವಾರಿಯನ್ನು ಆರ್ ಅಶೋಕ್ ಹೆಗಲಿಗೆ ಹಾಕಿದ್ದರಿಂದ ಅವರು ಹುಬ್ಬಳ್ಳಿಗೆ ಆಗಮಿಸಿ ಇದರ ಪೂರ್ವ ತಯಾರಿ ಹಾಗೂ ಪರಿಶೀಲನಾ ಕಾರ್ಯ ನಡೆಸುತ್ತಿರುವುದು ವಿಶೇಷವಾಗಿದೆ.

Comments